Friday, April 5, 2024

ಬೈಕ್ ಗೆ ಖಾಸಗಿ‌ ಬಸ್ ಡಿಕ್ಕಿ : ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು

ಬಂಟ್ವಾಳ: ಬೈಕ್ ಗೆ ಖಾಸಗಿ‌ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ಮೃತಪಟ್ಟ ಯುವಕ .

ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ, ಇಂದು ಆದಿತ್ಯ ವಾರ ರಜಾದಿನವಾದ ಕಾರಣ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕ ದಲ್ಲಿ ಅಪಘಾತ ನಡೆದಿದೆ .

ಕಲ್ಲಡ್ಕದಿಂದ ವಿಟ್ಲ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ಅತೀ ವೇಗದಿಂದ ಬರುತ್ತಿದ್ದ ಸೆಲಿನಾ ಖಾಸಗಿ‌ ಬಸ್ ಬೈಕ್ ಗೆ ಡಿಕ್ಕಿ ಯಾಗಿದೆ.

ಡಿಕ್ಕಿಯ ರಭಸಕ್ಕೆ ಲತೀಶ್ ಗೆ ಗಂಭೀರವಾಗಿ ಗಾಯವಾಗಿತ್ತು.ಈತನನ್ನು ಕೂಡಲೇ ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.

ಚಿಂತಾಜನಕ ಸ್ಥಿತಿಯಲ್ಲಿದ್ದ ಈತ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಆದರೆ ಗಂಭೀರ ಸ್ಥಿತಿಯಲ್ಲಿದ್ದ ಲತೀಶ್ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಟ್ರಾಫಿಕ್ ಎಸ್. ಐ.ಸುತೇಶ್ ಸ್ಥಳಕ್ಕೆ ಬೇಟಿ ನೀಡಿದ್ದು,ಪ್ರಕರಣ ದಾಖಲಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...