Monday, April 15, 2024

ಭಾರೀ ಗಾಳಿ ಮಳೆಗೆ ಬಂಟ್ವಾಳದ ಜನ ತತ್ತರ : ತಾಲೂಕಿನ ಹಲವೆಡೆ ಹಾನಿ, ಲಕ್ಷಾಂತರ ರೂ.ನಷ್ಟ

ಬಂಟ್ವಾಳ: ಬಂಟ್ವಾಳದಲ್ಲಿ ಸುರಿದ ಧಾರಾಕಾರ ಮಳೆಯ ಪರಿಣಾಮ ಹಲವೆಡೆ ಹಾನಿ ಸಂಭವಿಸಿದೆ. ಪುದು ಗ್ರಾಮದ ಸುಜೀರು ಬದಿಗುಡ್ಡೆಯಲ್ಲಿ ಅಬೂಬಕ್ಕರ್ ಸಿದ್ದಿಕ್ ಅವರ ಮನೆಯ ಗೋಡೆ ಕುಸಿದು ಹಾನಿಯಾಗಿದ್ದು, ಮನೆಯವರು ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. ಬಂಟ್ವಾಳ ಸಮೀಪದ ಲೊರೆಟ್ಟೋದಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು, ಸಂಚಾರಕ್ಕೆ ಅಡ್ಡಿಯಾಗಿತ್ತು.

ಕುರಿಯಾಳ ದುರ್ಗಾನಗರ ನಿವಾಸಿ ಅಪ್ಪಿ ಮೂಲ್ಯ, ಬಡಗಬೆಳ್ಳೂರು ಗ್ರಾಮದ ಬಾಳಿಕೆಯಲ್ಲಿ ವಾಮದೇವ, ವಿಟ್ಲಮುಡ್ನೂರಿನ ಮೂಡಾಯಿಮಾರುನಲ್ಲಿ ಸತೀಶ್ ಶೆಟ್ಟಿ ಅವರ ಕೊಟ್ಟಿಗೆ, ಅಳಿಕೆಯ ಕಾನತ್ತಡ್ಕದ ರಝಕ್, ನರಿಕೊಂಬು ಗ್ರಾಮದ ಶಾರದಾ ನೀಲಪ್ಪ, ವೀರಕಂಭ ಗ್ರಾಮದ ಮಜ್ಜೋನಿಯಲ್ಲಿ ಭಾಗಿ, ಅಮ್ಮುಂಜೆ ಗ್ರಾಮದ ಕೊರಗಪ್ಪ, ನರಿಕೊಂಬು ಗ್ರಾಮದ ಕರ್ಬೆಟ್ಟುನಲ್ಲಿ ಬಾಬು ಪೂಜಾರಿ ಅವರ ಮನೆಗಳಿಗೆ ಮರ, ತೆಂಗಿನಮರ ಬಿದ್ದು ಹಾನಿಯಾಗಿದೆ.

ಕರಿಯಂಗಳ ಗ್ರಾಮದ ಮಾರಿಯಮ್ಮ ಅವರ ಮನೆಯ ಮೇಲ್ಚಾವಣಿ ಕುಸಿದು ಭಾಗಶಃ ಹಾನಿಯಾಗಿದೆ. ಚೆನ್ನೆತ್ತೋಡಿ ಗ್ರಾಮದ ಕರಿಮಲೆಯಲ್ಲಿ ಶಿವರಾಮ ನಾಯಕ್ ಹಾಗೂ ಕಳ್ಳಿಗೆ ಗ್ರಾಮದ ದಿವಾಕರ್ ಅವರ ಅಡಿಕೆ ತೋಟಕ್ಕೆ ಹಾನಿಯಾಗಿದೆ.

More from the blog

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...

ಹಿರಿಯ ಮತ್ತು ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ ಕಾರ್ಯ ಪ್ರಾರಂಭ

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ...

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ… ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜನತೆ

ಉಳ್ಳಾಲ: ರೋಡ್ ಶೋ ಮೂಲಕ ನಡೆಸಿದ ಚುನಾವಣಾ ಪ್ರಚಾರ ಕಾರ್ಯ ಕಾಂಗ್ರೆಸ್'ಗೆ ಹೊಸ ಉತ್ಸಾಹ ತುಂಬುವಲ್ಲಿ ಸಫಲವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದು, ಅಭೂತಪೂರ್ವ...

ಪುಣಚ: ನಿರ್ಮಾಣ ಹಂತದ ಸೇತುವೆ ಕುಸಿತ : 7 ಮಂದಿ ಕಾರ್ಮಿಕರಿಗೆ ಗಾಯ

ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆಯ ಕೊನೆಯ...