ಮಂಗಳೂರು: ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್‌ನಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.
ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ.
ಇನ್ನು ಮಹಿಳೆ ನಾಗಮ್ಮ ಕಳೆದ 4ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಪುಷ್ಪರಾಜ್ ಅಮೀನ್ ಅವರು ಮುಂಬೈನಲ್ಲಿ ವಾಸವಾಗಿದ್ದು, ಯಾವಾಗಲಾದರೂ ಒಮ್ಮೆ ಊರಿಗೆ ಬರ್ತಾ ಇರುತ್ತಾರೆ. ಇದೀಗ ಊರಿಗೆ ಬಂದಿದ್ದು, ಈ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಡ್ರೈನೇಜ್ ಫಿಟ್ ನಲ್ಲಿ ಮಹಿಳೆ ಶವ ಮಡಚಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.