Friday, April 5, 2024

ಆಗಸ್ಟ್ 3ರ ನಂತರ ಕರಾವಳಿ ಭಾಗದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಳ

ಕರ್ನಾಟಕದ ಕರಾವಳಿ ಭಾಗಗಳಲ್ಲಿ ಆಗಸ್ಟ್ 3ರ ನಂತರ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗಲಿದೆ, ಎಚ್​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...