Monday, April 8, 2024

ಪ್ರವೀಣ್‌ ನೆಟ್ಟಾರು ಪ್ರಕರಣಕ್ಕೆ ಒಂದು ವರುಷ : ಪುತ್ಥಳಿಗೆ ಮಾಲಾರ್ಪಣೆ

ಪುತ್ತೂರು: ಬಿಜೆಪಿಯ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಇಂದಿಗೆ ಒಂದು ವರ್ಷವಾಗಿದ್ದು, ಮನೆ ಸಮೀಪದಲ್ಲಿರುವ ಪುತ್ಥಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾಲಾರ್ಪಣೆ ಮಾಡಿದ್ದಾರೆ.

ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿಯವರು ದೀಪ ಬೆಳಗಿಸಿದ ಬಳಿಕ ಆಗಮಿಸಿದ ಗಣ್ಯರು ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು.

ಈ ವೇಳೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಮಾತನಾಡಿ, ಪ್ರವೀಣ್ ನೆಟ್ಟಾರು ಅವರು ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾಗಿ ಇಂದಿಗೆ ಒಂದು ವರ್ಷವಾಗಿದ್ದು, ಪ್ರಮುಖ ನಾಲ್ಕು ಜನರ ಆರೋಪಿಗಳ ಬಂಧನ ಆಗಬೇಕಷ್ಟೆ. ತಲೆಮರೆಸಿಕೊಂಡಿರುವವರ ಮನೆಯಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಇವರ ಬಂಧನ ಕೂಡಲೇ ಆಗಬೇಕು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರ್, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಶ್ರೀನಾಥ್ ರೈ ಬಾಳಿಲ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಜಿಲ್ಲಾ ಯುವಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್, ಮಹೇಶ್ ಶೆಟ್ಟಿ, ಮೇನಾಲ, ವಸಂತ ನಡುಬೈಲು, ಸಚಿನ್ ಪೂವಾಜೆ, ಪ್ರವೀಣ್ ಪತ್ನಿ ನೂತನ ಪ್ರವೀಣ್, ತಾಯಿ ರತ್ನಾವತಿ ಹಾಗೂ ಕುಟುಂಬಸ್ಥರು, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

More from the blog

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...