ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ಇಂದು ಸುಬ್ರಹ್ಮಣ್ಯ ಸಮೀಪದ ದೇವರಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.
ಸಭಾಧ್ಯಕ್ಷತೆಯನ್ನು ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಅಧ್ಯಕ್ಷ ಸೀನಿಯರ್. ವಿಶ್ವನಾಥ ನಡು ತೋಟ ವಹಿಸಿದ್ದರು . ಪುಸ್ತಕದ ದಾನಿಗಳಾದ ಸೀನಿಯರ್ ಚೇಂಬರ್ ನ ನಿರ್ದೇಶಕರು, ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾದ ಸೀನಿಯರ್. ಲೊಕೇಶ ಬಿ.ಎನ್. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ದೇವದಾಸ್ ಮಣಿ ಬೈಲು ,ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಾಣಿ, ಸೀನಿಯರ್ ಚೇಂಬರ್ ಕಾರ್ಯದರ್ಶಿ ಸೀನಿಯರ್ .ಪ್ರಕಾಶ್ ಕಟ್ಟೆಮನೆ ಕೋಶಾಧಿಕಾರಿ ಮೋನಪ್ಪ. ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.