Sunday, April 7, 2024

ಬಂಟ್ವಾಳ ತಾಲೂಕಿನಲ್ಲಿ ಅಪರೂಪದ ಪ್ರೇತಾತ್ಮಗಳ ವಿವಾಹ ; ಏನಿದು ಅಂತೀರಾ? ಇಲ್ಲಿದೆ ನೋಡಿ

ದಕ್ಷಿಣ ಕನ್ನಡ: ಭೂತಾರಾಧನೆ, ದೈವಾರಾಧನೆಗಳ ನಂಬಿಕೆಯಿಂದಲೇ ಮನೆ ಮಾತಾಗಿರುವ ಕರಾವಳಿ ಭಾಗದ ಇನ್ನೊಂದು ವಿಶೇಷ ಎಂದರೆ ‘ಪ್ರೇತಗಳ ಮದುವೆ’. ಪ್ರತಿ ವರ್ಷದ ಆಷಾಢ ಮಾಸದಲ್ಲಿ ಇಲ್ಲಿ ಪ್ರೇತಗಳಿಗೆ ಮದುವೆ ಮಾಡುತ್ತಾರೆ. ಅದರಂತೆ ಇದೀಗ ಬಂಟ್ವಾಳ ತಾಲೂಕಿನ ವಗ್ಗ ಎಂಬಲ್ಲಿಯ ವದುವಿನ ಕುಟುಂಬ ಹಾಗೂ ಉಳ್ಳಾಲ ತಾಲೂಕಿನ ಕೋಣಾಜೆ ಸಮೀಪದ ಬೊಳ್ಮ ಎಂಬಲ್ಲಿಯ ವರನ ಕುಟುಂಬದ ನಡುವೆ ಮದುವೆ ಸಂಬಂಧ ಏರ್ಪಟ್ಟಿದೆ

ಬಂಟ್ವಾಳ ತಾಲೂಕಿನ ವಗ್ಗದ ಮಾಂಗಜೆ ಎಂಬಲ್ಲಿಯ ಸಂಜೀವ ಪೂಜಾರಿಯವರ ಮಗಳು ವಿಶಾಲಾಕ್ಷಿ 2 ವರ್ಷದ ಮಗುವಾಗಿದ್ದಾಗ ಅಂದರೆ ಸರಿ ಸುಮಾರು 35 ವರ್ಷಗಳ ಹಿಂದೆ ಮೃತ ಪಟ್ಟಿದ್ದಾರೆ. ಇನ್ನು ಉಳ್ಳಾಲದ ಕೊಣಾಜೆ ಸಮೀಪದ ಬೊಳ್ಮ ಗ್ರಾಮದ ಲಕ್ಷ್ಮಣ ಪೂಜಾರಿಯವರ ಪುತ್ರ ಧರಣೇಶ್ ಕಳೆದ ಎರಡು ವರ್ಷಗಳ ಹಿಂದೆ ಮೃತ ಪಟ್ಟಿದ್ದಾರೆ. ಹೌದು, ಹೃದಯದ ತೊಂದರೆ ಇದ್ದ ಕಾರಣ ಧರಣೇಶ್​ ಅವರಿಗೆ ಮದುವೆ ಮಾಡುವ ಬಗ್ಗೆ ಮನೆಯವರು ಯೋಚನೆ ಮಾಡಿರಲಿಲ್ಲ. ಆದ್ರೆ, ಧರಣೇಶ್​ಗೆ ಮದುವೆ ಆಗಬೇಕು ಎನ್ನುವ ಆಸೆ ಇತ್ತಾದರೂ ಹೃದಯದ ಕಾಯಿಲೆಯಿಂದ ಗುಣಮುಖವಾಗದೆ ಮೃತ ಪಟ್ಟಿದ್ದರು. ವದುವಿನ ಕಡೆಯವರಿಗೆ ಜ್ಯೋತಿಷ್ಯದಲ್ಲಿ ಕಂಡು ಬಂದಂತೆ ವಿಶಾಲಕ್ಷಿಗೆ ಮದುವೆ ಮಾಡಬೇಕಾಗಿತ್ತು. ಈ ವೇಳೆ ವರಾನ್ವೇಶಣೆ ನಡೆಸಿದಾಗ ಧರಣೇಶನ ಸಂಬಂಧ ಸಿಕ್ಕಿ ಎಲ್ಲಾ ಮಾತುಕತೆ ನಡೆಸಿ ಸಂಪ್ರದಾಯದಂತೆ ಮದುವೆ ಕಾರ್ಯ ಮಾಡಲಾಗಿದೆ.

ವಿಧಿವಿಧಾನ ದಂತೆ ವಧುವಿನ ಮನೆ ಭೇಟಿ, ವಿವಾಹ ನಿಶ್ಚಯ, ಮದರಂಗಿ ಶಾಸ್ತ್ರಗಳನ್ನು ನಡೆಸಲಾಯಿತು. ವಿವಾಹ ಸಮಾರಂಭದಲ್ಲಿ ಅಕ್ಷತೆ ಹಾಕಿದ ಬಳಿಕ ವಧು-ವರರಿಗೆ ಆರತಿ ಬೆಳಗಿ, ಚಪ್ಪಲಿ ಹಾಕಿ, ಕೊಡೆ ಹಿಡಿದು ಅಂಗಳಕ್ಕೆ ಇಳಿಯುವ ಸಂಪ್ರದಾಯ ನಡೆಯಿತು. ವಿವಾಹ ಕಾರ್ಯಕ್ರಮದ ಬಳಿಕ ಔತಣ ಬಡಿಸಿ, ಇನ್ನು ಮುಂದೆ ಕುಟುಂಬದವರಿಗೆ ಯಾವುದೇ ತೊಂದರೆ ನೀಡದಂತೆ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಬೀಗರಿಗೆ, ಮದುವೆಗೆ ಬಂದ ಅತಿಥಿಗಳಿಗೆ ಔತಣ, ಊಟದ ಬಳಿಕ ವಧುವಿನ ಕಡೆಯವರು ಹೆಣ್ಣಿನ ವಸ್ತ್ರ, ಆಭರಣ, ಕೊಡೆ ಮೊದಲಾದವುಗಳೊಂದಿಗೆ ಮನೆಗೆ ತೆರಳಿದರು.

ತುಳುನಾಡಿನಲ್ಲಿ ಆಟಿ ಮಾಸದಲ್ಲಿ ನಡೆಯುವ ಈ ಪ್ರೇತಗಳ ಮದುವೆ ವಿಚಿತ್ರ ಅನಿಸಿದರೂ, ಬಹಳಷ್ಟು ವರ್ಷದಿಂದ ಇದು ನಡೆದುಕೊಂಡು ಬಂದಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಕ್ಕಿಲ್ಲದೆ ಇದ್ದರೆ ಕುಟುಂಬದಲ್ಲಿ ಕಾಣಿಸುವ ಸಮಸ್ಯೆಗಳಿಗೆ ಜ್ಯೋತಿಷ್ಯದಲ್ಲಿ ಕಂಡು ಬರುವ ಪರಿಹಾರವಾಗಿ ಈ ರೀತಿಯ ಮದುವೆಗಳು ನಡೆಯುತ್ತದೆ. ಈ ಪ್ರೇತಾತ್ಮಗಳ ಮದುವೆ ತುಳು ಸಂಪ್ರದಾಯದ ಕಟ್ಟುಪಾಡುಗಳಂತೆ ನಡೆಯುವುದು ಒಂದು ವಿಶೇಷ.

 

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...