Tuesday, April 9, 2024

ಕಾರು – ರಿಕ್ಷಾ ಮುಖಾಮುಖಿ ಡಿಕ್ಕಿ : ಮಹಿಳೆಗೆ ಗಂಭೀರ ಗಾಯ

ಬಂಟ್ವಾಳ: ಕಾರು ಮತ್ತು ರಿಕ್ಷಾ ನಡುವೆ ಪರಸ್ಪರ ಡಿಕ್ಕಿ ಹೊಡೆದು ಓರ್ವ ಮಹಿಳಾ ಪ್ರಯಾಣಿಕೆ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಮೆಲ್ಲಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿ ಎಂಬಲ್ಲಿ ನಡೆದಿದೆ.

ಕಂಚಿನಡ್ಕ ಪದವು ನಿವಾಸಿ ಅಸಿಯಮ್ಮ ಅವರು ಗಂಭೀರವಾಗಿ ಗಾಯಗೊಂಡ ಮಹಿಳೆಯಾಗಿದ್ದು ಇವರು ಮಂಗಳೂರು ಖಾಸಗಿ‌ ಆಸ್ಪತ್ರೆಯಲ್ಲಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಳಿದಂತೆ ಇವರ ಮನೆಯವರಾದ ಶಹಿನಾದ್ ಹಾಗೂ ಅಲ್ತಫ್ ಮತ್ತು ರಿಕ್ಷಾ ಚಾಲಕ ಶಹೀದ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಸಾಲೆತ್ತೂರಿನಿಂದ ಮೂವರು ಪ್ರಯಾಣಿಕರು ಕೋಟೆಕಣಿ ಸಂಬಂಧಿಕರ ಮನೆಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.

ಕೋಟೆಕಣಿ ಒಳರಸ್ತೆಯಿಂದ ಮುಖ್ಯರಸ್ತೆಗೆ ಬರುವ ವೇಳೆ ಮುಖ್ಯರಸ್ತೆಯಲ್ಲಿ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯ ಪೋಲೀಸರು ಬೇಟಿ ನೀಡಿದ್ದಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...