Monday, April 15, 2024

ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳುವಾಯಿ ಎಂಬಲ್ಲಿ ನಡೆದಿದೆ.

ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಅವರ ಪುತ್ರ ಸಂತೋಷ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ.

ಸಂತೋಷ್ ಇಂದು ಮುಂಜಾನೆ ತಮ್ಮ ಪಕ್ಕದ ಮನೆಯಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಗೆ ಆಧಾರ ಸ್ತಂಭವಾಗಿದ್ದ ಇವರು ಮೂಡುಬಿದಿರೆಯಲ್ಲಿ 88 ಎಲೆಕ್ಟ್ರೋ ವರ್ಲ್ಡ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರು ಹೆಂಡತಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ

More from the blog

ಲೋಕಸಭಾ ಚುನಾವಣೆ : ಮತಯಂತ್ರಗಳ ಕಮಿಷನಿಂಗ್‌ ಕಾರ್ಯ…. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ :ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು. ಈ ಸಂದರ್ಭದಲ್ಲಿ...

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...