Thursday, April 11, 2024

ಕಾರ್ಮೆಲ್ ಕಾಲೇಜಿನಲ್ಲಿ ಪದವಿ ತರಗತಿಗಳ ಪ್ರಾರಂಭೋತ್ಸವ

ಮೊಡಂಕಾಪು : ಕಾರ್ಮೆಲ್ ಕಾಲೇಜು, ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭವು ಕಾರ್ಮೆಲ್ ಕಾಲೇಜಿನಲ್ಲಿ ಜರುಗಿತು.

ಮುಖ್ಯ ಅತಿಥಿಗಳು, ಪ್ರಾಂಶುಪಾಲರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿ ಪ್ರೊ. ಹೆಚ್. ಎಸ್ ಫೆರ್ನಾಂಡಿಸ್ ಮಾತನಾಡಿ ವಿದ್ಯಾರ್ಥಿಗಳು, ಹೆತ್ತವರು, ಆಡಳಿತ ಮಂಡಳಿ ಪರಸ್ಪರ ಅರಿತು ಹೊಂದಾಣಿಕೆಯಿಂದ ಶ್ರಮಿಸಿದರೆ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ ಹಾಗೂ ಶಿಸ್ತು ಬಹಳ ಮುಖ್ಯ ಎಂಬ ಸಂದೇಶವನ್ನು ನೀಡಿದರು.

ಹಳೆ ವಿದ್ಯಾರ್ಥಿನಿ ಕುಮಾರಿ ತೇಜಸ್ವಿ ತಮ್ಮ ಮೂರು ವರ್ಷಗಳ ವಿದ್ಯಾರ್ಥಿ ಜೀವನದ ನೆನಪನ್ನು ಮೆಲುಕು ಹಾಕುತ್ತಾ, ನಾವು ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಅದೇ ರೀತಿ ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ಕಾಲೇಜಿನ ವಾರ್ಷಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿ ವಂ|ಭ| ರೊಸಿಲ್ಡ್, ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾಸಂಸ್ಥೆಗಳು, ಸಂಪನ್ಮೂಲ ವ್ಯಕ್ತಿ ಪ್ರೊ. ಹೆಚ್. ಎಸ್ ಫೆರ್ನಾಂಡಿಸ್, ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ ಹಾಗೂ ಹಳೆ ವಿದ್ಯಾರ್ಥಿನಿ ಕುಮಾರಿ ತೇಜಸ್ವಿ ಉಪಸ್ಥಿತರಿದ್ದರು.

ಕುಮಾರಿ ನಿಹಾರಿಕಾ ಶೆಟ್ಟಿ, ವಾಣಿಜ್ಯ ಉಪನ್ಯಾಸಕರು ಕಾರ್ಯಕ್ರಮವನ್ನು ನಿರೂಪಿಸಿದರು, ಕುಮಾರಿ ವಿಜೇತ, ವಾಣಿಜ್ಯ ಉಪನ್ಯಾಸಕರು ಸರ್ವರನ್ನು ಸ್ವಾಗತಿಸಿದರು, ಕುಮಾರಿ ಅಲ್ವಿಶಾ III ಬಿ. ಕಾಂ. ವಂದಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...