Friday, April 19, 2024

ಬಂಟ್ವಾಳ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಸಜೀಪಮೂಡ ಗ್ರಾಮದ ಮಿತ್ತಮಜಲು ಕ್ಷೇತ್ರದ ವತಿಯಿಂದ ಬಂಟ್ವಾಳ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮವು ಮಿತ್ತಮಜಲು ಕ್ಷೇತ್ರದ ವಠಾರದಲ್ಲಿ ನಡೆಯಿತು. ಅರಣ್ಯ ಇಲಾಖೆಯ ವತಿಯಿಂದ ಕ್ಷೇತ್ರದ ವಠಾರದಲ್ಲಿ 7೦೦ ಗಿಡಗಳನ್ನು ನಾಟಿ ಮಾಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಪ್ರಕೃತಿಯ ಸಮತೋಲನ ಕಳೆದುಕೊಂಡಾಗ ಗಿಡ ಮರಗಳೇ ಅದನ್ನು ಸಹಜ ಸ್ಥಿತಿಗೆ ತರುತ್ತಿದ್ದು, ಅರಣ್ಯ ನಾಶವು ಪ್ರಾಕೃತಿಕ ವಿಕೋಪಗಳಿಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಸಮತೋಲನಕ್ಕಾಗಿ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಅದರ ಆರೈಕೆ ಮಾಡಬೇಕು ಎಂದರು.

ಮAಗಳೂರು ಡಿಸಿಎಫ್ ಆ್ಯಂಟನಿ ಎಸ್.ಮರಿಯಪ್ಪ ಮಾತನಾಡಿ, ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ನಾವು ಅರಣ್ಯ ಸಂಪತ್ತನ್ನು ಕಳೆದುಕೊಳ್ಳುತ್ತಿದ್ದು, ಅದರ ಹೊಂದಾಣಿಕೆಯ ದೃಷ್ಟಿಯಿಂದ ಪ್ರತಿಯೊಂದೆಡೆ ಮಳೆಗಾಲದಲ್ಲಿ ಗಿಡ ನೆಡುವ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಸಂಘ ಸಂಸ್ಥೆಗಳ ವಠಾರದಲ್ಲಿ ನೆಟ್ಟ ಗಿಡಗಳ ನಿರ್ವಹಣೆಯನ್ನು ಸ್ಥಳೀಯರು ಮಾಡಬೇಕಿದೆ ಎಂದರು.

ಮಿತ್ತಮಜಲು ಕ್ಷೇತ್ರದ ಪ್ರಮುಖರಾದ ಶ್ರೀಕಾಂತ್ ಶೆಟ್ಟಿ ಸಂಕೇಶ, ಸಹಾಯಕ ಅರಣ್ಯ ಸಂರಕ್ಷಣಾಽಕಾರಿ ಪಿ.ಶ್ರೀಧರ್, ಬಂಟ್ವಾಳ ವಲಯ ಅರಣ್ಯಾಽಕಾರಿ ರಾಜೇಶ್ ಬಳಿಗಾರ್, ಅರಣ್ಯ ಇಲಾಖೆ ಸಿಬಂದಿ, ಸಜೀಪಮೂಡ ಗ್ರಾ.ಪಂ.ಸದಸ್ಯರು, ಕ್ಷೇತ್ರಕ್ಕೆ ಸಂಬAಧಪಟ್ಟವರು, ಗ್ರಾಮಸ್ಥರು ಪಾಲ್ಗೊಂಡಿದ್ದರು

More from the blog

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ರಸ್ತೆ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರ ಹಿತ ಹಾಗೂ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಎ.19 ಮತ್ತು 20ರಂದು ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ...

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...