Saturday, April 13, 2024

ಬಡವರಿಗೆ ಸರಕಾರ ನೀಡುವ ಅಕ್ಕಿಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಾಂತರ ರೂ ಅವ್ಯವಹಾರದ ವಿಚಾರ ಮುಂದುವರಿದ ತನಿಖೆ

ಬಂಟ್ವಾಳ: ಬಡವರಿಗಾಗಿ ನೀಡಲು ಸರಕಾರ ನೀಡಿರುವ ಅಕ್ಕಿಯಲ್ಲಿ ಕೋಟ್ಯಾಂತರ ರೂ ಮೌಲ್ಯದ ಅಕ್ಕಿಯ ಅವ್ಯವಹಾರ ನಡೆದಿದೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸ್ ತನಿಖೆ ಮುಂದುವರಿದಿದೆ.

ಬಿಸಿರೋಡಿನ ತಲಪಾಡಿಯ ಗೊಡೌನ್ ನಿಂದ ಮಿಸ್ಸಿಂಗ್ ಆಗಿರುವ 1.32 ಕೋಟಿ ಮೌಲ್ಯದ ಅಕ್ಕಿಯ ವಿಚಾರವಾಗಿ ವಿವಿಧ ಆಯಾಮಗಳಲ್ಲಿ ಪೋಲೀಸ್ ತನಿಖೆ ನಡೆಯುತ್ತಿದೆ.

ಅಕ್ಕಿಯ ಲೆಕ್ಕಾಚಾರದ ಗೊಂದಲ ಉಂಟಾದ ಕೂಡಲೇ ಕೆ.ಎಫ್.ಸಿ‌‌.ಎಸ್.ಸಿ. ಮೇಲಾಧಿಕಾರಿಗಳು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರನ್ನು ನೀಡಿ 1.32 ಕೋಟಿಗಿಂತಲೂ ಅಧಿಕ ಮೌಲ್ಯದ ಸುಮಾರು 3892 ಗಿಂತಲೂ ಹೆಚ್ಚಿನ ಕಿಂಟ್ವಾಲ್ ಅಕ್ಕಿಯ ಕೊರತೆ ಕಂಡು ಬಂದಿದೆ ಎಂದು ತಿಳಿಸಿದ್ದರು.

ಇದಕ್ಕೂ ಮೊದಲು ಸಾರ್ವಜನಿಕ ದೂರಿನ ಮೇರೆಗೆ ಶಾಸಕ ರಾಜೇಶ್ ನಾಯ್ಕ್ ಅವರು ಈ ವಿಚಾರವಾಗಿ ತನಿಖೆ ನಡೆಸಿ ಎಂದು ಜಿಲ್ಲಾಧಿಕಾರಿ ಗೆ ಪತ್ರ ಬರೆದಿದ್ದರು. ಕೋಟ್ಯಾಂತರ ರೂ ಮೌಲ್ಯದ ಅವ್ಯವಹಾರ ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಎಸ್.ಪಿ.ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.ಬಳಿಕ ಇಲ್ಲಿನ ಅಧಿಕಾರಿಗಳಲ್ಲಿ ಮಾಹಿತಿ ಪಡೆದುಕೊಂಡಿದ್ದರು. ಸರಿಯಾದ ದಾಖಲೆಗಳ ಸಹಿತ ತನಿಖೆ ನಡೆಸುವಂತೆಯೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ವಿಚಾರವಾಗಿ ಕೆ.ಎಫ್.ಸಿ.ಎಸ್.ಸಿ.ನಿಗಮದ ರಾಜ್ಯ ಮಟ್ಟದ ಅಧಿಕಾರಿಗಳನ್ನು ಕರೆಸಿಕೊಂಡು ಸರಿಯಾದ ವರದಿ ನೀಡುವಂತೆ ಜಿಲ್ಲಾಧಿಕಾರಿ ಅದೇಶ ಮಾಡಿದ್ದಾರೆ.

ತನಿಖೆ ಮುಂದುವರಿದಿದೆ
ಅಕ್ಕಿಯ ಅವ್ಯವಹಾರ ಕುರಿತಾದ ಮಾಹಿತಿಯನ್ನು ಪೊಲೀಸ್ ಇಲಾಖೆಯಲ್ಲಿ ಕೇಳಿದರೆ ಸದ್ಯ ಪ್ರಕರಣ ತನಿಖೆಯ ಹಂತದಲ್ಲಿರುವ ಕಾರಣ ಯಾವುದೇ ಮಾಹಿತಿಯನ್ನು ‌ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಗೊಡೌನ್ ನಲ್ಲಿ ಮ್ಯಾನೇಜರ್ ಆಗಿರುವ ವಿಜಯ್ ಅವರ ಮೇಲೆ ಮೇಲಾಧಿಕಾರಿಗಳು ನೀಡಿದ ದೂರಿನಂತೆ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈತನ ವಿಚಾರಣೆಯನ್ನು ನಿನ್ನೆಯ ದಿನವೇ ಮಾಡಿದ್ದಾರೆ. ಈತ ನೀಡಿದ ಮಾಹಿತಿ ಆಧರಿಸಿ ಮತ್ತು ಪೊಲೀಸ್ ತನಿಖೆಯಿಂದ ಸಿಗುವ ಮಾಹಿತಿಯಿಂದ ಇಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಬೆಳಕಿಗೆ ಬರಬಹುದು.ಇದು ಕೇವಲ ಒಂದು ತಿಂಗಳಿನಲ್ಲಿ ಆಗಿರುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.ಒಂದು ವೇಳೆ ಒಂದು ತಿಂಗಳಲ್ಲಿ ಇಷ್ಟು ಅವ್ಯವಹಾರ ಆದರೆ ಎಷ್ಟು ವರ್ಷಗಳ ಹಿಂದಿನಿಂದ ನಡೆಯುತ್ತಿರಬಹುದು,ಎಷ್ಟು ಕೋಟಿ ರೂ ಅವ್ಯವಹಾರ ನಡೆದಿರಬಹುದು? ಹೀಗೆ ಅನೇಕ ಪ್ರಶ್ನೆಗಳು ಉದ್ಭವವಾಗುವುದು ಸತ್ಯ.
ಇದು ಕೇವಲ ಒಬ್ಬ ಮ್ಯಾನೇಜರ್ ನಿಂದ ನಡೆಯಲು ಸಾಧ್ಯನಾ? ಇದರ ಇರುವ ದೊಡ್ಡ ದೊಡ್ಡ ತಿಮಿಂಗಿಲಗಳು ಯಾರು ಎಲ್ಲಾ ತನಿಖೆಯ ಬಳಿಕ ತಿಳಿಯಬಹುದು.

More from the blog

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...