Thursday, April 11, 2024

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಬಗ್ಗೆ ಸಾಮಾಜಿಕ ಮಾಧ್ಯಮಗಳು ಅಪಪ್ರಚಾರದಲ್ಲಿ ತೊಡಗಿದ್ದು ಇದು ಸತ್ಯಕ್ಕೆ ದೂರ-ಸದಾನಂದ ನಾವೂರ

ಬಂಟ್ವಾಳ: ಕೆಲವು ದಿನಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಬಗ್ಗೆ ಸಾಮಾಜಿಕ ಮಾಧ್ಯಮಗಳು ಅಪಪ್ರಚಾರದಲ್ಲಿ ತೊಡಗಿದ್ದು ಇದು ಸತ್ಯಕ್ಕೆ ದೂರವಾಗಿದೆ ಎಂದು ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಸದಾನಂದ ನಾವೂರ ಹೇಳಿದರು.

ಅವರು ಬಿಸಿರೋಡಿನ ಪ್ರಸ್ ಕ್ಲಬ್ ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪ್ರಗತಿಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಸಂಸ್ಥೆಗಳ ಅಂಗವಾಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ವಿಚಾರ ತಿಳಿಸಿದರು.

ಶೇ. 2%, ಬಡ್ಡಿಗೆ ಬ್ಯಾಂಕಿನಿಂದ ಹಣ ಪಡೆದು 18% ಬಡ್ಡಿ ಪಡೆಯುತ್ತಾರೆ ಎಂದು ಅಪಪ್ರಾಚಾರ ಮಾಡಿ ಸಂಘದ ಸದಸ್ಯರಿಗೆ ಸಂಶಯವುಂಟು ಮಾಡುವಂತ ಕೃತ್ಯ ನಡೆಯುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ, ಟ್ರಸ್ಟ್ ಮೂಲಕ ಸಂಘವು ಬಂಟ್ವಾಳ ತಾಲೂಕಿನಲ್ಲಿ ಸುಮಾರು ಮೂವತ್ತೈದು ಸಾವಿರಕ್ಕೂ ಹೆಚ್ಚು ಕುಟುಂಬಗಳು ಸಂಘದ ಸದಸ್ಯರಾಗಿ ಸಂಘದ ವ್ಯವಹಾರಗಳನ್ನು ಮಾಡಿಕೊಂಡು ಬರುತ್ತಿವೆ. ತಮ್ಮ ಕುಟುಂಬದ ಮನೆ ರಿಪೇರಿ, ಮದುವೆ, ಕೈ, ಸಾಲ ಮರುಪಾವತಿ, ವ್ಯವಹಾರ, ಹೈನುಗಾರಿಕೆ, ಚಿನ್ನ ಖರೀದಿ, ಮಕ್ಕಳಿಗೆ ವಿದ್ಯಾಭ್ಯಾಸ ಹಾಗೂ ಸ್ವ ಉದ್ಯೋಗಕ್ಕಾಗಿ ಸಾಲ ಪಡೆದುಕೊಂಡು ಸ್ವಾವಲಂಬಿಯಾಗಿ ಬದುಕುತ್ತಿದ್ದೇವೆ ಎಂದು ಅವರು ತಿಳಿಸಿದರು.

ಸರಕಾರ ಮಾಡದ ಸುಮಾರು ಕೆಲಸಗಳನ್ನು ಸಂಘ ಮಾಡಿದೆ. ಅನೇಕ ಸವಲತ್ತುಗಳನ್ನು ಗ್ರಾಮಾಭಿವೃದ್ದಿ ಯೋಜನೆ ನೀಡುತ್ತಾ ಬಂದಿದೆ. ಸ್ವ ಉದ್ಯೋಗ ಮಾಡಲು ಪ್ರೋತ್ಸಾಹ ಧನ ನೀಡಿದ್ದಾರೆ.

ಸಂಘದ ಸದಸ್ಯರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ಧನ ನೀಡಿದೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಸ್ವಾವಲಂಬಿ ಬದುಕಿಗೆ ನಮಗೆ ದಾರಿದೀಪವಾಗಿದ್ದು, ಇಂತಹ ಸಂಘದ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ರಾಜ್ಯವ್ಯಾಪಿಯಾಗಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು‌.ಜೊತೆಗೆ ಸಾಮಾಜಿಕ ‌ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದವರ ಮೇಲೆ ಕಾನೂನು ‌ಕ್ರಮವನ್ನು ಕೈಗೊಳ್ಳುವ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.

ವಿಟ್ಲ ವಲಯ ಅಧ್ಯಕ್ಷ ರಾಜೇಂದ್ರ, ಬಿಸಿರೋಡು ಒಕ್ಕೂಟದ ಮಾಜಿ ಅಧ್ಯಕ್ಷ ಶೇಕರ ಸಾಮನಿ, ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...