Wednesday, October 18, 2023

ಅಕ್ರಮವಾಗಿ ವಿವಿಧ ಜಾತಿಯ ಮರಗಳ ಸಾಗಾಟ : ಆರೋಪಿ ಸಹಿತ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ

Must read

ಅಕ್ರಮವಾಗಿ ಮರ ಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆಯವರು ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

ವಾಹನ ಮತ್ತು ಅಮಾನತು ಪಡಿಸಿದ ಸೊತ್ತಿನ ಸಮೇತ ಮೌಲ್ಯವೊಟ್ಟು 7 ಲಕ್ಷ ಆಗಿದೆ

ಅಗಸ್ಟ್ 29ರಂದು ಬಂಟ್ವಾಳ ತಾಲೂಕು ಬಂಟ್ವಾಳ ಮೂಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರ ಬಿಸಿ ರೋಡ್ ಜಂಕ್ಷನ್ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ಕಟ್ಟಿಗೆಯನ್ನು ಸಾಗಾಟ ಮಾಡುವ ತಕ್ಷಿರು ಪತ್ತೆ ಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ.

ಪ್ರಕರಣದಲ್ಲಿ ಬಂಟ್ವಾಳ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ ಉಪವಲಯ ಅರಣ್ಯಾಧಿಕಾರಿ ಪ್ರೀತಮ್ ಎಸ್ ,ಯಶೋಧರ ,ಗಸ್ತು ಅರಣ್ಯ ಪಾಲಕರಾದ ಜಿತೇಶ್ ಪಿ., ದಯಾನಂದ ,ಶೋಭಿತ್ ,ಹಾಗೂ ಇಲಾಖಾ ವಾಹನ ಹಂಗಾಮಿ ಚಾಲಕ ಜಯರಾಮ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

ಪ್ರಕರಣದ ಮುಂದಿನ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್ ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ ಇವರ ಮಾರ್ಗದರ್ಶನದಲ್ಲಿ ವಲಯ ಅಧಿಕಾರಿ ರಾಜೇಶ್ ಬಳೆಗಾರ ಅವರು ನಡೆಸಲಿದ್ದಾರೆ

More articles

Latest article