Monday, October 23, 2023

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ: ಇಬ್ಬರು ಆರೋಪಿಗಳು ಅಂದರ್ ಗಾಂಜಾ ವಿರುದ್ದ ನಿರಂತರವಾಗಿ ಕಾರ್ಯಾಚರಣೆಯಲ್ಲಿ ತೊಡಗಿರುವ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ನೇತ್ರತ್ವದ ತಂಡ

Must read

ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಜೀಪ ಮುನ್ನೂರು ಗ್ರಾಮದ ನಂದಾವರ ಕೋಟೆ ನಿವಾಸಿ ಮಹಮ್ಮದ್ ಶಾಕಿಬ್ ಹಾಗೂ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆರೀಫ್ ಬಂಧಿತ ಆರೋಪಿ.

ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ ಶಾಲಾ ಬಳಿ ಇಬ್ಬರು ಯುವಕರು ಮಾದಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಸ್ಥಳೀಯರು ನೀಡಿದ ದೂರಿನಂತೆ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್ ಐ ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ.ಬಳಿಕ ವೈದ್ಯರ ಬಳಿ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅಧಿಕೃತವಾದ ವೈದ್ಯಕೀಯ ದೃಡಪತ್ರ ಸಿಕ್ಕಿದೆ.

ಇಬ್ಬರು ಆರೋಪಿಗಳನ್ನು ಸೂಕ್ತವಾದ ಕಾನೂನು ಕ್ರಮಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಗಾಂಜಾ ಗೋಜು, ಯಶಸ್ಸು ಸಾಧಿಸಲು ಸಾಧ್ಯನಾ…? 

ಗಾಂಜಾ ವಿರುದ್ದ ಟೊಂಕ ಕಟ್ಟಿ ನಿಂತ ಬಂಟ್ವಾಳ ಪೊಲೀಸರ ತಂಡ ನಿರಂತರವಾಗಿ ಮಾದಕ ವಸ್ತುಗಳ ಸೇವನೆ,ಮಾರಾಟದ ವಿರುದ್ಧ ಕಾರ್ಯಚರಣೆ ನಡೆಸಿ,ಸಮಾಜದ ಸ್ವಾಸ್ಥ್ಯ ವನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯನ್ನೋಮ್ಮುಖವಾಗಿದೆ.

ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ದಾಳಿ ನಡೆಸುತ್ರಲೆ ಬಂದಿದ್ದು,ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತವಾದ ಕಾನೂನು ಕ್ರಮವನ್ನು ಅನುಸರಿಸಿದೆ.

More articles

Latest article