Sunday, April 21, 2024

ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಜನ್ಮ ದಿನಾಚರಣೆ

ಬಂಟ್ವಾಳ: ನಾರಾಯಣ ಗುರುಗಳ ಕಾಲದ ಸಾಮಾಜಿಕ ಪರಿಸ್ಥಿತಿಯನ್ನು ಇಂದು ಊಹಿಸುವುದು ಕೂಡ ಅಸಾಧ್ಯದ ಮಾತು. ಆದರೆ ಯಾವುದೇ ಸಂಘರ್ಷವಿಲ್ಲದೆ ಅವರು ಇಡೀ ಸಮಾಜವನ್ನು ಜಾಗೃತಗೊಳಿಸಿದ ಕಾಯಕ ನಮ್ಮೆಲ್ಲರಿಗೂ ಆದರ್ಶವಾಗಬೇಕಿದ್ದು, ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸದೆ ಇಡೀ ಸಮಾಜದ ಆದರ್ಶವಾಗಿ ಸ್ವೀಕರಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹೇಳಿದರು.

ಅವರು ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣಗುರು ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಚೇತನ್ ಮುಂಡಾಜೆ ಅವರು ಉಪನ್ಯಾಸ ನೀಡಿ, ಯುಗದ ಕಣ್ಣು ತೆರೆಸಿದ ಸಂತನಾಗಿರುವ ನಾರಾಯಣ ಗುರುಗಳು ಶೂದ್ರರಿಗಾಗಿ ದೇವಾಲಯವನ್ನು ಸ್ಥಾಪಿಸುವ ಮೂಲಕ ಆದರ್ಶರಾಗಿದ್ದು, ಸ್ವಂತಿಕೆಯ ಬೆಳವಣಿಗೆಗೆ ಪ್ರೇರಣೆ ನೀಡಿದ್ದರು ಎಂದರು.

ಬಂಟ್ವಾಳ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇನಾ ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ, ಬಿಲ್ಲವ ಸಮಾಜ ಸೇವಾ ಸಂಘ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಜಾ ರಾಜೇಶ್, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ರಾಷ್ಟç ಪ್ರಶಸ್ತಿ ಪುರಸ್ಕೃತ ನಿವೃತ್ತ ಅಧ್ಯಾಪಕ ರಮೇಶ್ ನಾಯಕ್ ರಾಯಿ, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯಕುಮಾರ್ ಉಪಸ್ಥಿತರಿದ್ದರು.

ತಾಲೂಕು ಕಚೇರಿ ಸಿಬಂದಿ ಜನಾರ್ದನ್ ಸ್ವಾಗತಿಸಿ, ಶ್ರೀಕಲಾ ಕಾರಂತ್ ವಂದಿಸಿದರು. ಉಪತಹಶೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು.

More from the blog

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...

ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಎಸ್.ಎಂ. ಮುಹಮ್ಮದ್ ಅಲಿ ಯವರಿಗೆ ಅಭಿನಂದನೆ

ಬಂಟ್ವಾಳ : ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ ಅವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್...

ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ. ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ...

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...