Monday, April 15, 2024

ಬಿ.ಸಿ.ರೋಡ್ ಪೊಲೀಸ್ ಲೇನ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನೆ, ನಿಧಿ ಸಮರ್ಪಣೆ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ಕ್ಷೇತ್ರದ ನೂತನ ವೆಬ್‌ಸೈಟ್ ಅನಾವರಣ ಕಾರ್ಯಕ್ರಮ

ಬಂಟ್ವಾಳ: ಮನೆ ಮನೆಯಲ್ಲೂ ಭಗವಂತನ ನಾಮಸ್ಮರಣೆಯಿಂದ ಸಂಪತ್ತು ಒದಗುತ್ತದೆ, ದೇವಸ್ಥಾನಗಳ ಅಭಿವೃದ್ಧಿಯಿಂದ ಜನರು, ಊರಿನ ಅಭಿವೃದ್ಧಿಯಾಗುತ್ತದೆ ಎಂದು ಪೊಳಲಿ ಶ್ರೀ ರಾಮಕೃಷ್ಣ ತಪೋವನದ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದಜಿ ಹೇಳಿದರು.

ಭಾನುವಾರ ಬಿ.ಸಿ.ರೋಡ್ ಪೊಲೀಸ್ ಲೇನ್ ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನೆ, ನಿಧಿ ಸಮರ್ಪಣೆ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ಕ್ಷೇತ್ರದ ನೂತನ ವೆಬ್‌ಸೈಟ್ ಅನಾವರಣ ಕಾರ್ಯಕ್ರಮದಲ್ಲಿ ಅವರು ಆಶೀರ್ಚನ ನೀಡಿದರು.

ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರದಲ್ಲಿ ಆಧ್ಯಾತ್ಮಿಕ ಸಾಧನೆಯ ಜತೆಗೆ ಲಕ್ಷ್ಮೀಯನ್ನು ಒಲಿಸಿಕೊಳ್ಳುವ ಅಗತ್ಯವಿದ್ದು, ಪ್ರತಿ ಮನೆ ಮನೆಯಲ್ಲೂ ಭಗವಂತನ ಜಪ ನಡೆದಾಗ ಸಂಪತ್ತು ತನ್ನಿಂತಾನೆ ಹರಿದು ಬರುತ್ತದೆ ನಮ್ಮೊಳಗಿನ ವೈರತ್ವವನ್ನು ದೂರ ಮಾಡಿ ಪ್ರೀತಿ ಬೆಳೆಸುವ ಕಾರ್ಯ, ನಮ್ಮ ಉದ್ಧಾರದ ಜತೆಗೆ ಜಗತ್ತಿನ ಕಲ್ಯಾಣವೂ ಆಗಬೇಕಿದೆ ಎಂದರು.

ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ, ನ್ಯಾಯವಾದಿ ಅಶ್ವನಿಕುಮಾರ್ ರೈ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಐ ಹರೀಶ್ ಎಂ.ಆರ್. ವೆಬ್‌ಸೈಟ್ ಅನಾವರಣಗೊಳಿಸಿದರು. ಆಡಳಿತ ಸಮಿತಿಯ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಪ್ರಸ್ತಾವನೆಗೈದು ಮುಂದಿನ ದಿನಗಳಲ್ಲಿ ನಡೆಯಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು. ಆಡಳಿತ ಸಮಿತಿಯ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅಧ್ಯಕ್ಷರು ವಹಿಸಿದ್ದರು.

ಬಿ.ಸಿ.ರೋಡು ಶ್ರೀ ಚಂಡಿಕಾಪರಮೇಶ್ವರೀ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಲೋಕನಾಥ ಶೆಟ್ಟಿ, ಶ್ರೀ ರಕ್ತೇಶ್ವರೀ ಸನ್ನಿಧಿ ಅಧ್ಯಕ್ಷ ಬಿ.ವಿಶ್ವನಾಥ್, ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಮಾದಕಟ್ಟೆ, ನಿವೃತ್ತ ಪೊಲೀಸ್ ಅಧಿಕಾರಿಗಳಾದ ಆನಂದ, ಕೇಪು ಗೌಡ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಬಿ.ಸಂಜೀವ ಪೂಜಾರಿ ವಂದಿಸಿದರು. ಪೊಲೀಸ್ ಸಿಬಂದಿ ವಿವೇಕ್ ರೈ ಕಾರ್ಯಕ್ರಮ ನಿರ್ವಹಿಸಿದರು.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...