ಬೆಳ್ತಂಗಡಿ: ವಿದ್ಯಾರ್ಥಿನಿಯೊಬ್ಬಳು ಹಠಾತ್ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಡೆದಿದೆ.
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ ಪುತ್ರಿ ಸುಮಾ ಮೃತ ಯುವತಿ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಈಕೆ ಆಗಸ್ಟ್ 9 ರಂದು ಅನಾರೋಗ್ಯಕ್ಕೆ ತುತ್ತಾಗಿದ್ದಾಳೆ. ಹೀಗಾಗಿ ಆಕೆ ಸ್ಥಳೀಯ ಆಸ್ಪತ್ರೆಗೆ ತೆರಳಿ ಮಾತ್ರೆಗಳನ್ನು ಪಡೆದು ಮನೆಯಲ್ಲಿದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಆದ್ರೆ
ಆಗಸ್ಟ್ 11 ರಂದು ಅನಾರೋಗ್ಯ ಉಲ್ಭಣಿಸಿದ ಪರಿಣಾಮ ಆಕೆಯನ್ನು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಬಳಿಕ ಗುಣಮುಖಳಾದ ಆಕೆ ಮನೆಗೆ ತೆರಳಿದ್ದು. ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ
ಈಕೆ ಲೋ ಬಿಪಿಯಿಂದ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.