Wednesday, October 18, 2023

ಸರಣಿ ಕಳ್ಳತನ ಪ್ರಕರಣ : ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

Must read

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸೇರಿದಂತೆ ಹಲವೆಡೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ.ಕೆ ಪೂಜಾರಿ ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಕೆಲ ದಿನಗಳಿಂದ ಮುಂಡಾಜೆ, ಕಕ್ಕಿಂಜೆ, ಉಜಿರೆ, ಸೋಮಂತಡ್ಕ, ಕಲ್ಮಂಜ, ಕನ್ಯಾಡಿ, ಗುರುವಾಯನಕೆರೆ ನೆರಿಯ, ವೇಣೂರು ಮೊದಲಾದೆಡೆ ಸರಣಿ ಕಳ್ಳತನಗೈದಿದ್ದ ಅಂತರ್ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈತ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟಿಯೊಂದನ್ನು ಕಳ್ಳತನಗೈದು ಅದರಲ್ಲಿ ಸುತ್ತಾಡುತ್ತಾ ಒಬ್ಬಂಟಿಯಾಗಿ ರಾತ್ರಿವೇಳೆ ಹಲವೆಡೆ ಕಳ್ಳತನ ಕೃತ್ಯವೆಸಗುತ್ತಿದ್ದನೆಂದು ತನಿಖೆಯಿಂದ ದೃಢಪಟ್ಟಿದೆ.

ಆರೋಪಿಯು ಕುಖ್ಯಾತ ಕಳ್ಳನಾಗಿದ್ದು ಈಗಾಗಲೇ ಈತನ ವಿರುದ್ದ ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವ, ಹಿರಿಯಡಕ, ಪಡುಬಿದ್ರಿ, ಮುಲ್ಕಿ, ಹೆಬ್ರಿ, ಉಡುಪಿ ನಗರ, ದಾವಣಗೆರೆ ಗ್ರಾಮಾಂತರ ಮತ್ತು ಬೆಳಗಾಂ ಮಾರ್ಕೆಟ್‌ ಪೊಲೀಸ್‌ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿವೆ.

More articles

Latest article