Wednesday, April 10, 2024

ಆಗಸ್ಟ್ 23 ‘ಬಾಹ್ಯಾಕಾಶ ದಿನ’, ಚಂದ್ರಯಾನ-3 ನೌಕೆ ಇಳಿಸಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ನಾಮಕರಣ -ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 ನೌಕೆ ಇಳಿಸಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಹಾಗೂ ಚಂದ್ರಯಾನ-2 ಇಳಿದ ಸ್ಥಳಕ್ಕೆ ‘ತಿರಂಗ ಪಾಯಿಂಟ್’ ಎಂದು ನಾಮಕರಣ ಮಾಡಲು ಭಾರತ ನಿರ್ಧಾರ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇವತ್ತು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋದ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ಚಂದ್ರಯಾನ-2 ಪತನ ಸ್ಥಳಕ್ಕೆ ‘ತಿರಂಗ ಪಾಯಿಂಟ್’​ ಎಂದು ನಾಮಕರಣ ಮಾಡಿದರು, ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಚಂದ್ರನವರೆಗೂ ತಲುಪಿದೆ. ವಿಜ್ಞಾನಿಗಳ ಸಾಧನೆ ದೇಶದ ಪ್ರತಿಯೊಬ್ಬರಿಗೂ ತಿಳಿಯಬೇಕಿದೆ. ಚಂದ್ರಯಾನ-3 ರ ಯಶಸ್ಸಿನಿಂದ ಯುವ ಪೀಳಿಗೆಗೆ ನಿರಂತರವಾಗಿ ಪ್ರೇರಣೆ ಸಿಗಲಿದೆ. ಹೀಗಾಗಿ ಆಗಸ್ಟ್​ 23ರಂದು ‘ರಾಷ್ಟ್ರೀಯ ಬಾಹ್ಯಾಕಾಶ​ ದಿನ’ ಎಂದು ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ಕೇಂದ್ರ, ರಾಜ್ಯ ಸರ್ಕಾರ ಸಹಯೋಗದಲ್ಲಿ ಬಾಹ್ಯಾಕಾಶ, ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗುವುದು. ಇಸ್ರೋ ವಿಜ್ಞಾನಿಗಳು ಹಲವು ಉಪಗ್ರಹ ಉಡಾವಣೆ ಮಾಡಿದ್ದಾರೆ. ಈ ಉಪಗ್ರಹಗಳ ನೆರವಿನಿಂದ ಹಲವು ಕ್ಷೇತ್ರಗಳಿಗೆ ಅನುಕೂಲ ಆಗ್ತಿದೆ. ಕೃಷಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಿಗೆ ಅನುಕೂಲವಾಗುತ್ತಿದೆ. ತಂತ್ರಜ್ಞಾನ ಬೆಳವಣಿಗೆಯಾದರೆ ದೇಶ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಗ್ರೀಕ್​ ದೇಶದಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್​ಎಎಲ್​​ ಏರ್​ಪೋರ್ಟ್​​ನಲ್ಲಿ ವಿಜ್ಞಾನಿಗಳು, ಅಧಿಕಾರಿಗಳು ಸ್ವಾಗತಿಸಿದರು. ನಂತರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ತೇಜಸ್ವಿ ಸೂರ್ಯ, ಎಸ್​​​.ಮುನಿಸ್ವಾಮಿ, ಶಾಸಕರಾದ ಭೈರತಿ ಬಸವರಾಜ್​​, ಮಂಜುಳಾ ಲಿಂಬಾವಳಿ ಪ್ರಧಾನಿಯವರನ್ನು ಸ್ವಾಗತಿಸಿದರು.

 

More from the blog

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...