Wednesday, October 18, 2023

ಚಂದ್ರಯಾನ-3 ನೌಕೆಯಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್

Must read

ಚಂದ್ರಯಾನ-3 ನೌಕೆಯಿಂದ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ. ಈ ಸುದ್ದಿಯನ್ನು ಇಸ್ರೋ ಖಚಿತಪಡಿಸಿದ್ದು, ಎಲ್ಲರಿಗೂ ಧನ್ಯವಾದ ತಿಳಿಸಿದೆ.

ವಿಕ್ರಮ್ ಲ್ಯಾಂಡರ್ ಅನ್ನು ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ಸುಮಾರು 1600 ಗಂಟೆಗಳವರೆಗೆ ಯೋಜಿಸಲಾದ ಚಂದ್ರಯಾನ-3 ನಾಳೆ ಚಂದ್ರನ ಬಳಿಗೆ ಮತ್ತಷ್ಟು ಹತ್ತಿರವಾಗಲಿದೆ ಎಂದು ಸ್ಪಷ್ಟಪಡಿಸಿದೆ.

ಕಳೆದ ಜುಲೈ 14ರಂದು ಉಡಾವಣೆಯಾಗಿದ್ದ ಚಂದ್ರಯಾನ-3 ತನ್ನ ಯಶಸ್ವಿ ಪ್ರಯಾಣವನ್ನು ಮುಂದುವರಿಸಿದೆ. ಆಗಸ್ಟ್ 5ರಂದು ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ಚಂದ್ರಯಾನ 3, ಆಗಸ್ಟ್‌ 16ರಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಪ್ರವೇಶಿಸಿದೆ. ಎಲ್ಲಾ ಅಂದುಕೊಂಡತೆ ಆದರೆ ಇದೇ ಆಗಸ್ಟ್ 23ರ ಸಂಜೆ 5.45ಕ್ಕೆ ಚಂದ್ರನ ಮೇಲ್ಮೈನ ಮೇಲೆ ಸಾಫ್ಟ್ ಲ್ಯಾಂಡ್ ಆಗಲಿದೆ.

 

More articles

Latest article