Wednesday, October 18, 2023

ಜಿಲ್ಲಾಧಿಕಾರಿ ಕಚೇರಿ ಮುಂದೆ ದ.ಕ ಜಿಲ್ಲಾ ಬಿಜೆಪಿ ಶಾಸಕರಿಂದ ಪ್ರತಿಭಟನೆ

Must read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿಯೆಂದು ಹಾಗೂ ಅಧಿಕಾರಿಗಳ ಅಮಾನತು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಬಾಗ ದರಣಿ ಪ್ರತಿಭಟನೆ ನಡೆಸಲಾಯಿತು.

ಶಾಸಕರ ಹಕ್ಕುಚ್ಯುತಿ ಆಗಿದೆ, ಮೂಡುಬಿದಿರೆ ಕ್ಷೇತ್ರದ ಇರುವೈಲು ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಮ ಪಂಚಾಯತ್ ನ ಉದ್ಘಾಟನಾ ಕಾರ್ಯಕ್ರಮವನ್ನು ಶಿಷ್ಟಾಚಾರ ನೆಪದಲ್ಲಿ ರದ್ದುಪಡಿಸಿ, ಅಧಿಕಾರಿಗಳ ಅಮಾನತುಗೊಳಿಸಿರುವುದನ್ನು ಖಂಡಿಸಿ, ಹಾಗೂ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಡಿಸಿ ಕಚೇರಿಯ ಬಾಗಿಲಲ್ಲಿ ಶಾಸಕರು ಧರಣಿ ನಡೆಸುತ್ತಿದ್ದಾರೆ

ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ಭಾಗಿಯಾಗಿದ್ದಾರೆ‌.

More articles

Latest article