Saturday, April 6, 2024

ಬಚ್ಚಲು ಮನೆಗೆ ನುಗ್ಗಿ ಯುವಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ : ಪ್ರಕರಣ ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರು ರಾತ್ರಿಯ ವೇಳೆ ಬಚ್ಚಲು ಮನೆಗೆ ಸ್ನಾನಕ್ಕೆಂದು ಹೋದಾಗ ನೆರೆಮನೆಯ ಯುವಕ ಅಕ್ರಮವಾಗಿ ಬಚ್ಚಲು ಮನೆ ಪ್ರವೇಶಿಸಿ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೋಜ್ ಒ.ಆರ್. ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಿ.

ಈತ ಬಚ್ಚಲು ಮನೆಗೆ ಅಕ್ರಮ ಪ್ರವೇಶ ಮಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಈ ವೇಳೆ ಮಹಿಳೆ ಬೊಬ್ಬೆ ಹೊಡೆದಿದ್ದು ಮನೆಯವರು ಹೊರಬರುವ ವೇಳೆ ಆರೋಪಿ ಓಡಿ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...