Monday, October 23, 2023

ಆಲಂಗಾರು ಈಶ್ವರ ಭಟ್ ನಿಧನ

Must read

ವಿಟ್ಲ : ಕೇಪು ಗ್ರಾಮದ ಆಲಂಗಾರು ನಿವಾಸಿ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಆಲಂಗಾರು ಈಶ್ವರ ಭಟ್ ಅವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಆ.11ರಂದು ನಿಧನ ಹೊಂದಿದರು.

ಕೇಪು ಗ್ರಾ.ಪಂ. ಉಪಾಧ್ಯಕ್ಷರಾಗಿದ್ದ ಅವರು ಪಡಿಬಾಗಿಲು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಸ್ಥಾಪನೆಯಲ್ಲಿ‌ ಪ್ರಮುಖ ಪಾತ್ರ ವಹಿಸಿ, ಅಭಿವೃದ್ಧಿ ಸಮಿತಿ ಸ್ಥಾಪಕ ಅಧ್ಯಕ್ಷರಾಗಿದ್ದರು. ಕೇಪು ಮೈರ ಶ್ರೀ ದುರ್ಗಾ ಮಿತ್ರ ವೃಂದದ ಸ್ಥಾಪಕ ಅಧ್ಯಕ್ಷರಾಗಿ, ಜನಸಂಘ ಸ್ವಯಂಸೇವಕರಾಗಿ, ಕೇಪು ಗ್ರಾಮದಲ್ಲಿ ಬಿಜೆಪಿಯನ್ನು ಸಂಘಟಿಸಿ, ಕೇಪು ಗ್ರಾಮ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ವಿಟ್ಲ ಸೀಮೆ ಹವ್ಯಕ ಯುವ ಪರಿಷತ್ ಕಾರ್ಯದರ್ಶಿಯಾಗಿ, ಕೇಪು ಹವ್ಯಕ ವಲಯದ ಉಪಾಧ್ಯಕ್ಷರಾಗಿ, ಪುಣಚ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ವಿವಿಧ ಯುವಕ ಮಂಡಲ, ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿ ಸೇವೆ ಸಲ್ಲಿಸಿದ ಅವರನ್ನು ಗುರುತಿಸಿ ಗೌರವಿಸಲಾಗಿತ್ತು.

ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

 

More articles

Latest article