Wednesday, October 25, 2023

ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ಮಹಿಳೆಗೆ ವಂಚನೆ ; ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Must read

ಬೆಳ್ತಂಗಡಿ: ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 8 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿ ನಡೆದಿದೆ.

ಪಡಂಗಡಿ ನಿವಾಸಿ ನೀನಾ ರೋಡ್ರಿಗಸ್ ವಂಚನೆಗೆ ಒಳಗಾದ ಮಹಿಳೆ.

ಆ.1ರಂದು ನೀನಾ ರೋಡ್ರಿಗಸ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಶೇ.5 ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ಹೇಳಿದ್ದಾರೆ. ಅದಕ್ಕಾಗಿ ಬ್ಯಾಂಕ್ ದಾಖಲೆಗಳನ್ನು ನೀಡುವಂತೆ ಸೂಚಿಸಿದ್ದಾರೆ. ಅದರಂತೆ ನೀನಾ ಅವರು ತಮ್ಮ ಬ್ಯಾಂಕ್ ದಾಖಲೆಗಳನ್ನು ಅವರೊಂದಿಗೆ ಹಂಚಿಕೊಂಡಿದ್ದಾರೆ. ಇದಾದ ಬಳಿಕ ಅಪರಿಚಿತ ವ್ಯಕ್ತಿ ಲೋನ್ ಸಲುವಾಗಿ ಆ. 1ರಿಂದ 8 ರವರೆಗೆ ಇವರ ಬ್ಯಾಂಕ್ ಖಾತೆಯಿಂದ 8,40,275 ರೂ. ಆನ್ ಲೈನ್ ಮುಖಾಂತರ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿ ವಂಚಿಸಿದ್ದಾರೆ ಎಂದು ನೀನಾ ರೋಡ್ರಿಗಸ್ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

More articles

Latest article