Wednesday, October 25, 2023

ಆಗಸ್ಟ್ 27 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಡಿಕೆ ಶಿವಕುಮಾರ್

Must read

ಬೆಂಗಳೂರು: ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಯೋಜನೆ ಉದ್ಘಾಟನೆ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆ ಸಭೆ ನಡೆಸಿದ ನಂತರ ವಿಧಾನಸೌಧದಲ್ಲಿ ಮಾತನಾಡಿದ avar, ಉದ್ಘಾಟನಾ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗಿದೆ ಎಂದರು

ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಎಲ್ಲಾ ನಗರಸಭೆ, ಪುರಸಭೆ, ಗ್ರಾಮ ಪಂಚಾಯಿತಿಗಳಲ್ಲಿ ಉದ್ಘಾಟನೆ ನಡೆಯಲಿದೆ. ಪಂಚಾಯಿತಿಗೊಬ್ಬ ನೋಡಲ್ ಆಫೀಸರ್​ ನೇಮಕ ಮಾಡಿದ್ದೇವೆ. ಪಕ್ಷಾತೀತವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಎಲ್ಲರಿಗೂ ಅನುಕೂಲ ಆಗಲೆಂದು ಭಾನುವಾರ ಕಾರ್ಯಕ್ರಮ ನಿಗದಿ ಮಾಡಲಾಗಿದೆ. ಹೀಗಾಗಿ ಎಲ್ಲರೂ ಭಾಗವಹಿಸುವಂತೆ ಮನವಿ ಮಾಡಿದರು.

ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 1.5 ಕೋಟಿ ಜನರು ನೋಂದಾಯಿಸಿಕೊಂಡಿದ್ದಾರೆ. ಈ ಯೋಜನೆಗೆ ನೋಂದಣಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇಲ್ಲ. ಯಾವಾಗ ಬೇಕಾದರೂ ನೋಂದಣಿಗೆ ಅವಕಾಶ ಇದೆ ಎಂದು ತಿಳಿಸಿದರು.

More articles

Latest article