ಮೈಸೂರು: ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದ್ದು, ನೋಂದಾಯಿಸಿಕೊಂಡ 1.9 ಕೋಟಿ ಮಹಿಳೆಯರ ಖಾತೆಗಳಿಗೆ ಏಕಕಾಲಕ್ಕೆ 2 ಸಾವಿರ ರೂ. ಹಣ ವರ್ಗಾವಣೆಯಾಗಲಿದೆ.
ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಪ್ರಮುಖ ನಾಯಕರು, ಸಚಿವರು ಪಾಲ್ಗೊಳ್ಳಲಿದ್ದಾರೆ.
“ಗೃಹಲಕ್ಷ್ಮಿ” ಯೋಜನೆಗೆ ಈ ವರೆಗೆ 1.08 ಕೋಟಿ ಮಹಿಳೆಯರು ಯಶಸ್ವಿಯಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಇಂದೇ ಎಲ್ಲಾ ನೋಂದಾಯಿತ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ ರೂ. 2,000 ನೇರ ವರ್ಗಾವಣೆ ಆಗಲಿದೆ. ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮಕ್ಕಾಗಿ ರೂ. 17,500 ಕೋಟಿ ಮೀಸಲಿಡಲಾಗಿದೆ. ರಾಜ್ಯದ 10,400 ಸ್ಥಳಗಳಲ್ಲಿ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ.
ರಾಜ್ಯಾದ್ಯಂತ 10,400 ಸ್ಥಳಗಳು, 6 ಸಾವಿರಕ್ಕೂ ಹೆಚ್ಚು ಗ್ರಾ.ಪಂ.ಗಳು, ವಾರ್ಡ್‌ಗಳಲ್ಲಿ ಒಂದು ಕಡೆ, ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿದೆ