Sunday, October 22, 2023

ವೀರಕಂಭ ಗ್ರಾ.ಪಂ ನಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ

Must read

ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತಿ ವೀರಕಂಭ ಇದರ ಸಯೋಗದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಸಭಾಭವನದಲ್ಲಿ ನಡೆಯಿತು,

ಪಂಚಾಯತಿ ವತಿಯಿಂದ ಬೃಹತ್ ಪರದೆ ಅವಲಡಿಸಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನದ ಉದ್ಘಾಟನಾ ಕಾರ್ಯಕ್ರಮದ ನೇರ ವೀಕ್ಷಣೆಯ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮ ಪಂಚಾಯತ್ ಅಧ್ಯಕ್ಷ ಲಲಿತಾ, ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸದಸ್ಯರುಗಳಾದ ಗೀತ ಜಯಶೀಲ ಗಾಂಭೀರ್, ಅಬ್ದುಲ್ ರಹೀಮಾನ್, ಗ್ರಾಮ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ನೇಹ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಸಿಬ್ಬಂದಿಗಳು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್, ಪಂಚಾಯತಿ ಸಿಬ್ಬಂದಿಗಳು, ವೀರಕಂಬ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

More articles

Latest article