ವಿಟ್ಲ : ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಡೆಯುತ್ತಿರುವ ವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿಹಬ್ಬ ಮಹೋತ್ಸವದ ಸಲುವಾಗಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಾಮೂಹಿಕ ಲಕ್ಷ್ಮೀ ಪೂಜೆ, ಬಾಲಭೋಜನ, ಧರ್ಮಸಭೆ ನಡೆಯುತ್ತಿದ್ದು ಅದರ ಅಂಗವಾಗಿ ಆ.13ರಂದು ಬೆಳಗ್ಗೆ ಮತ್ತು ಮಧ್ಯಾಹ್ನ ಕಾರ್ಯಕ್ರಮದಲ್ಲಿ ಹಿರೇಮಗಳೂರು ಕಣ್ಣನ್ ಭಾಗವಹಿಸಿ, ವಿಶೇಷ ಪ್ರವಚನ ನೀಡಲಿದ್ದಾರೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.