Saturday, April 6, 2024

ಹಳೆ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ನಂಬರ್ ಪ್ಲೇಟ್‌ ಕಡ್ಡಾಯ.. : ನ. 17ರ ನಂತ್ರ ಬೀಳುತ್ತೆ ದಂಡ..!

ಬೆಂಗಳೂರು: ದೇಶದಲ್ಲಿ ವಾಹನಗಳಿಗೆ ಏಕರೂಪ ನೋಂದಣಿ ಸಂಖ್ಯೆ ಫಲಕ ಅಳವಡಿಕೆ ಕುರಿತಂತೆ ಸಾರಿಗೆ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 2019ರ ಏಪ್ರಿಲ್‌ 1ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳು ನವೆಂಬರ್‌ 17ರೊಳಗೆ ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ಪ್ಲೇಟ್‌ (ಎಚ್‌ಎಸ್‌ಆರ್‌ಪಿ) ಅಳವಡಿಸಿಕೊಳ್ಳುವಂತೆ ಆದೇಶಿಸಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019ರ ಏಪ್ರಿಲ್‌ 1ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯವಾಗಿದೆ. ಅದರ ಅನುಷ್ಠಾನವನ್ನು ಈವರೆಗೆ ಮಾಡಿರದ ಸಾರಿಗೆ ಇಲಾಖೆ, ಇದೀಗ ಆ ಕುರಿತು ಆದೇಶ ಹೊರಡಿಸಿದೆ. ನವೆಂಬರ್‌ 17ರೊಳಗೆ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಒಂದು ವೇಳೆ ನಿಗದಿತ ಅವಧಿಯೊಳಗೆ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದಿದ್ದರೆ ವಾಹನಗಳಿಗೆ 500ರಿಂದ 1 ಸಾವಿರ ರು. ದಂಡ ವಿಧಿಸುವುದಾಗಿಯೂ ಎಚ್ಚರಿಕೆ ನೀಡಲಾಗಿದೆ
HSRP ನಂಬರ್ ಪ್ಲೇಟ್ ವಿಶೇಷತೆ ಏನು…?
  1. HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.
  2. ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
  3. ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
  4. ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
  5. ರಸ್ತೆಗಳಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಗುರುತಿಸಲು ಸಹಕಾರಿ.
  6. ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ

HSRP ನಂಬರ್‌ ಪ್ಲೇಟ್‌ ಮಾಡಿಸುವುದು ಎಲ್ಲಿ..?

  1. ಹಳೆ ವಾಹನಗಳ ಮಾಲೀಕರು ವಾಹನಗಳ ಅಧಿಕೃತ ಡೀಲರ್‌ಗಳು ಅಥವಾ ಶೋ ರೂಂಗಳ ಮೂಲಕ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗೆ ಮುಂಗಡವಾಗಿ ಕೋರಿಕೆ ಸಲ್ಲಿಸಿ ಹಣ ಪಾವತಿಸಬೇಕಾಗುತ್ತದೆ.
  2. ನಾಲ್ಕು ಚಕ್ರಗಳ ವಾಹನಕ್ಕೆ ಎಚ್‌ಎಸ್‌ಆರ್‌ಪಿ ಪ್ಲೇಟ್‌ ಬೆಲೆಯು 400 ರಿಂದ 500 ರೂ.ವರೆಗೆ ಬೆಲೆ ಇರಲಿದೆ. ದ್ವಿಚಕ್ರ ವಾಹನಗಳಿಗೆ 250 ರಿಂದ 300 ರೂ. ಇರುತ್ತದೆ.
  3. ವಾಹನ ಉತ್ಪಾದಕ ಕಂಪೆನಿಗಳು ಎಚ್‌ಎಸ್‌ಆರ್‌ಪಿ ಪ್ಲೇಟ್‌ಗಳನ್ನು ಶೋ ರೂಂಗಳಿಗೆ ಪೂರೈಸಲು ಅಧಿಕೃತ HSRP ತಯಾರಕರೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಹಳೆ ವಾಹನಗಳಿಗೂ ಸಹ ಅಧಿಕೃತ ಎಚ್‌ಎಸ್‌ಆರ್‌ಪಿ ತಯಾರಕರು ಪ್ಲೇಟ್‌ಗಳನ್ನು ಪೂರೈಸುತ್ತಾರೆ.
  4. HSRP ತಯಾರಕರಿಂದ ಬಂದಿರುವ ನಂಬರ್‌ಪ್ಲೇಟ್‌ಗಳನ್ನು ಶೋರೂಂಗಳಲ್ಲಿ ಅಳವಡಿಸಲಾಗುತ್ತದೆ.
  5. ಇದು ಹೈಸೆಕ್ಯುರಿಟಿ ನಂಬರ್‌ ಪ್ಲೇಟ್‌ ಆಗಿರುವುದರಿಂದ ಶೋರೂಂ ಸಿಬ್ಬಂದಿ ಅಥವಾ ವಾಹನ ತಯಾರಕ ಕಂಪೆನಿಯವರು ವಾಹನ್‌ ಪೋರ್ಟಲ್‌ನಲ್ಲಿ ಲೇಸರ್‌ ಕೋಡಿಂಗ್‌ ನವೀಕರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
  6. ನೋಂದಣಿ ಪ್ರಮಾಣಪತ್ರ ಮತ್ತು ಕಾರ್ಯಕ್ಷಮತೆ ಪ್ರಮಾಣಪತ್ರ (ಎಫ್‌.ಸಿ.) ಹೊಂದಿರದ ವಾಹನಗಳು ಹಾಗೂ ಮಿತಿ ಮೀರಿದ ರಸ್ತೆ ತೆರಿಗೆ ಹೊಂದಿರುವ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲಾಗದು.

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್.. ಕೋಳಿ ಮಾಂಸದ ದರ ಏರಿಕೆ

ಮಂಗಳೂರು: ಕೋಳಿಮಾಂಸ, ಮೀನಿನ ದರ ಏರುಗತಿ ಯಲ್ಲಿ ಸಾಗುತ್ತಿದ್ದು ಮಾಂಸಾಹಾರ ಪ್ರಿಯರ ಜೇಬಿಗೂ ಕತ್ತರಿ ಬೀಳುವಂತಾಗಿದೆ. ಪ್ರಸ್ತುತ ಕೋಳಿಮಾಂಸಕ್ಕೆ (ವಿದ್‌ ಸ್ಕಿನ್‌) ಕೆ.ಜಿ.ಗೆ ಬ್ರಾಯ್ಲರ್‌ ಕೆಲವು ಕಡೆ 235-240 ರೂ., ಟೈಸನ್‌ 270 ರೂ....