Friday, October 27, 2023

ಕಟೀಲು ದೇಗುಲದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜವಂದನೆಗೈದ ಆನೆ ಮಹಾಲಕ್ಷೀ : ತ್ರಿರಂಗದ ಅಲಂಕಾರದಲ್ಲಿ ಕಂಗೊಳಿಸಿದ ಶ್ರೀ ದುರ್ಗಾಪರಮೇಶ್ವರೀ ದೇವಿ

Must read

ಮಂಗಳೂರು: ಪ್ರಸಿದ್ದ ಧಾರ್ಮಿಕ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ವಿಶೇಷ ಎಂದರೆ ದೇವಳದ ಆನೆ ಮಹಾಲಕ್ಷೀ ರಾಷ್ಟ್ರ ಧ್ವಜವನ್ನು ಹಿಡಿದು, ಧ್ವಜ ವಂದನೆ ಮಾಡಿದ್ದು ವಿಶೇಷವಾಗಿತ್ತು.

ಈ ಹಿಂದೆ ಪುಟ್ ಬಾಲ್, ಕ್ರಿಕೆಟ್ ಆಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಮಹಾಲಕ್ಷೀ ಇಂದು ರಾಷ್ಟ್ರಧ್ವಜ ಹಿಡಿದು ಧ್ವಜ ವಂದನೆ ಮಾಡಿದ್ದು ಎಲ್ಲರ ಗಮನ ಸೆಳೆಯಿತು. ನಿವೃತ್ತ ಸೈನಿಕ ಲಕ್ಷ್ಮೀನಾರಾಯಣ ರಾವ್ ಧ್ವಜಾರೋಹಣಗೈದರು. ನಿವೃತ್ತ ಸೈನಿಕ ನವಾನಂದ ಎಕ್ಕಾರು ದಿಕ್ಸೂಚಿ ಮಾತುಗಳನ್ನಾಡಿದರು.  ವೇಳೆ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರು. ಅರ್ಚಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಇದೇ ವೇಳೆ ಕ್ಷೇತ್ರದ ದೇವಿಗೆ ಕೇಸರಿ ಬಿಳಿ ಹಸಿರು ಬಣ್ಣದ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ.

More articles

Latest article