Thursday, October 26, 2023

ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಜಯರಾಮ ಭಟ್ ನಿಧನ : ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಂತಾಪ

Must read

ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಜಯರಾಮ ಭಟ್ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಸರಳ ವ್ಯಕ್ತಿತ್ವವನ್ನು ಹೊಂದಿದ್ದ ಅವರು ಬ್ಯಾಂಕಿನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸದಾ ಹಸನ್ಮುಖಿಯಾಗಿದ್ದು, ಕರ್ತವ್ಯ ನಿರ್ವಹಿಸಿ, ಕರ್ಣಾಟಕ ಬ್ಯಾಂಕ್ ವತಿಯಿಂದ ಎಲ್ಲರಿಗೂ ಸೂಕ್ತ ಸಹಾಯ, ಮಾರ್ಗದರ್ಶನ ನೀಡಿ ಉತ್ತಮ ಸೇವೆ ಮಾಡಿ ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.

More articles

Latest article