Thursday, October 19, 2023

ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಅಳಕೆಮಜಲು ನಲ್ಲಿ ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Must read

ವಿಟ್ಲ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ಹಾಕಲು ಶಾಲಾ ಹಂತದಲ್ಲಿ ಮಾಡುವ ಪ್ರತಿಭಾ ಕಾರಂಜಿಗಳು ಸೂಕ್ತ ವೇದಿಕೆ ಆಗಿದೆ ಎಂದು ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪದ್ಮನಾಭ ಸಫಲ್ಯ ಹೇಳಿದರು.

ಅವರು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಅಳಕೆಮಜಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿ ನಡೆದ ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2023-2024 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ ಜಯಕರ್ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ರಮೇಶ್ ಎಂ ಬಾಯರ್ ಮಾಡಿದರು.. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುಮಲತಾ, ಶಿಕ್ಷಣ ಸಂಯೋಜಕರಾದ ಸುಧಾ, ಪ್ರತಿಮಾ, ಕ್ಲಸ್ಟರ್ ಸಿ ಆರ್ ಪಿ ಜ್ಯೋತಿ, ಬಂಟ್ವಾಳ ತಾಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀಪತಿ, ಸಂಘದ ವಿಟ್ಲ ಪ್ರತಿನಿಧಿ ವಿಶ್ವನಾಥ ಗೌಡ ಮೊದಲದವರು ಉಪಸ್ಥಿತರಿದ್ದರು

ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಇಸ್ಮಾಲಿ .ಕೆ ಸ್ವಾಗತಿಸಿ, ಕ್ಲಸ್ಟರ್ ಸಿ ಆರ್ ಪಿ ಜ್ಯೋತಿ ಪ್ರಾಸ್ತಾವಿಕ ಮಾತನಾಡಿ ಶಾಲಾ ಶಿಕ್ಷಕಿ ರಾಜೀವಿ ವಂದಿಸಿದರು ಶಿಕ್ಷಕಿ ಜಯಂತಿ ಕಾರ್ಯಕ್ರಮ ನಿರೂಪಿಸಿದರು ,

More articles

Latest article