Thursday, April 11, 2024

ಆಗಸ್ಟ್‌ ಅಂತ್ಯದವರೆಗೂ ಕರಾವಳಿಯ ಪ್ರವಾಸಿ ತಾಣಗಳ ಭೇಟಿ ನಿರ್ಬಂಧ

ಉಡುಪಿ: ಪ್ರವಾಸೋದ್ಯಮ ಸ್ಥಳಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿಗೆ ಜಿಲ್ಲಾಡಳಿತ ವಿಧಿಸಿರುವ ನಿರ್ಬಂಧವನ್ನು ಆಗಸ್ಟ್‌ ಅಂತ್ಯದವರೆಗೂ ವಿಸ್ತರಿಸಿದೆ.

ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ನಡೆದ ದುರ್ಘ‌ಟನೆಯ ಅನಂತರದಲ್ಲಿ ಬೀಚ್‌ ಸಹಿತ ಜಲಪಾತ ಹಾಗೂ ಮಳೆಗಾಲದಲ್ಲಿ ಅಪಾಯಕಾರಿಯಾಗಿ ಪರಿಣಮಿಸುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಇದೀಗ ಜಿಲ್ಲೆಯಾದ್ಯಂತ ಮಳೆ ಕಡಿಮೆಯಾಗಿದ್ದರೂ ನಿರ್ಬಂಧವನ್ನು ವಾಪಸ್‌ ಪಡೆದಿಲ್ಲ. ಈ ತಿಂಗಳ ಅಂತ್ಯದವರೆಗೂ ನಿರ್ಬಂಧ ಇರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಮಳೆಗಾಲದಲ್ಲಿ ಯಾವಾಗ ಬೇಕಾದರೂ ಮಳೆಯ ಪ್ರಮಾಣ ಹೆಚ್ಚಾಗಬಹುದು. ನಿರ್ಬಂಧ ವಾಪಸ್‌ ಪಡೆದ ಅನಂತರದಲ್ಲಿ ಪುನಃ ಪರಿಸ್ಥಿತಿ ನಿಯಂತ್ರಿಸುವುದು ತಕ್ಷಣದಲ್ಲಿ ಕಷ್ಟವೂ ಆಗಬಹುದು. ಹೀಗಾಗಿ ಮಾಸಾಂತ್ಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ನಿರ್ಬಂಧ ತೆರವುಗೊಳಿಸುವ ಬಗ್ಗೆ ತೀರ್ಮಾನಿಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ತಿಳಿಸಿದ್ದಾರೆ.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ದ.ಕ. ಉಡುಪಿ ಜಿಲ್ಲೆಗೆ ಇಂದು ರಜೆ ಘೋಷಣೆ : ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ

ಮಂಗಳೂರು: ಈದ್ ಉಲ್-ಫಿತರ್ ಪ್ರಯುಕ್ತ ಏಪ್ರಿಲ್ 10ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ...