Saturday, April 13, 2024

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ನೇಮಕಾತಿ : ತಿಂಗಳಿಗೆ 65,000 ಸಂಬಳ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಆಫೀಸ್ ಅಸಿಸ್ಟೆಂಟ್, ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ ಇಲ್ಲಿದೆ .
ಸಂಸ್ಥೆ                          – ಕರ್ನಾಟಕ ವಿದ್ಯುತ್ ನಿಗಮ ನಿಯಮಿತ
ಹುದ್ದೆ                          – ಆಫೀಸ್ ಅಸಿಸ್ಟೆಂಟ್, ಅಸಿಸ್ಟೆಂಟ್
ಒಟ್ಟು ಹುದ್ದೆ                    –  2
ವೇತನಮಾಸಿಕ                – 65,000
ಉದ್ಯೋಗದ ಸ್ಥಳ              – ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ  – ಆಗಸ್ಟ್ 25, 2023

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಟು ಹೆಡ್- 1
ಆಫೀಸ್ ಅಸಿಸ್ಟೆಂಟ್- 1

ವಯೋಮಿತಿ:
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 60 ವರ್ಷ ಮತ್ತು ಗರಿಷ್ಠ 70 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಅಸಿಸ್ಟೆಂಟ್ ಟು ಹೆಡ್- ಮಾಸಿಕ  65,000
ಆಫೀಸ್ ಅಸಿಸ್ಟೆಂಟ್- ಮಾಸಿಕ 35,000

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಆಗಸ್ಟ್ 25ರೊಳಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 17/08/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಆಗಸ್ಟ್ 25, 2023

More from the blog

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...