Sunday, October 22, 2023

ದೇಶದ ಜನತೆಗೆ ಗುಡ್‌ನ್ಯೂಸ್‌ : ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 200 ರೂ. ಇಳಿಕೆ

Must read

ನವದೆಹಲಿ: ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಗೃಹ ಬಳಕೆಯ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿಯಾಗಿ 200 ರೂ ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್‌, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳು ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ಪಡೆಯುವ ಸಬ್ಸಿಡಿ ದರ 400 ರೂ. ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಸಬ್ಸಿಡಿ ದರವು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಅನಿಲ ಕಂಪನಿಗಳಾದ ಇಂಡಿಯನ್‌ ಆಯಿಲ್‌, ಹಿಂದೂಸ್ತಾನ್‌ ಪೆಟ್ರೋಲಿಯಂ ಮತ್ತು ಭಾರತ್‌ ಪೆಟ್ರೋಲಿಯಂ ಖಾತೆಗಳಿಗೆ ಜಮೆ ಆಗಲಿದೆ.

 

More articles

Latest article