Wednesday, October 18, 2023

ಆಟಿಕೆ ಪಿಸ್ತೂಲ್ ತೋರಿಸಿ ಕಾರು ಸುಲಿಗೆ ಪ್ರಕರಣ ; ಆರೋಪಿ ಅರೆಸ್ಟ್

Must read

ಮಂಗಳೂರು: ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ ದೋಚಿದ್ದ ಪ್ರಕರಣದ ಆರೋಪಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ಬಜಾಲ್ ನಂತೂರಿನ ನೌಫಾಲ್ ಯಾನೆ ಟೊಪ್ಪಿ ನೌಫಾಲ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಪ್ರಕರಣದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಜೀದ್ ಸೈಯದ್ ಎಂಬವರನ್ನು ನೌಫಾಲ್ ಮತ್ತು ಪುಚ್ಚ ಎಂಬವರು ಕಿಡ್ನಾಪ್ ಮಾಡಿ 5 ಲಕ್ಷ ರೂ. ಹಾಗೂ ಕಾರು ನೀಡುವಂತೆ ಬೇಡಿಕೆ ಇಟ್ಟಿದ್ದರು. ಅವರು ಕೊಡಲು ನಿರಾಕರಿಸಿದಾಗ ಅವರ ಬಳಿಯಿಂದ ಕಾರು, ಮೊಬೈಲ್ ಹಾಗೂ 18 ಸಾವಿರ ರೂ, ಸುಲಿಗೆ ಮಾಡಿ ಪರಾರಿಯಾಗಿದ್ದರು ಎಂದು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಗ್ರಾಮಾಂತರ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನೌಫಾಲ್‌ನನ್ನು ಪಾಂಡೇಶ್ವರ ಪೊಲೀಸ್ ನಿರೀಕ್ಷಕ ಎ.ಸಿ.ಲೋಕೇಶ್ ಅವರು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆಗೊಳಪಡಿಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.

 

More articles

Latest article