Wednesday, October 18, 2023

ಡಿಸಿ ಮನ್ನಾ ಸ್ಥಳಗಳ ಪಟ್ಟಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚನೆ

Must read

ಮಂಗಳೂರು: ನಿವೇಶನ ಹಾಗೂ ಕೃಷಿಗಾಗಿ ಅರ್ಹರಿಗೆ ಡಿಸಿ ಮನ್ನಾ ಜಮೀನು ನೀಡಲು ಬೆಳ್ತಂಗಡಿ, ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕಿನಲ್ಲಿ ಡಿಸಿ ಮನ್ನಾ ಜಮೀನು ಎಂದು ಘೋಷಿಸಲಾಗಿರುವ ಸ್ಥಳಗಳ ಪಟ್ಟಿಯನ್ನು ಒದಗಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ನಿರ್ದೇಶನ ನೀಡಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಡಿಸಿ ಮನ್ನಾ ಜಮೀನಿಗೆ ಸಂಬಂಧಿಸಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಮೀನು ಮಾಹಿತಿ ವ್ಯತ್ಯಾಸ ಜಿಲ್ಲೆಯಲ್ಲಿರುವ ಡಿಸಿ ಮನ್ನಾ ಜಮೀನುಗಳು ಯಾವುದು, ಎಷ್ಟಿದೆ ಎಂಬ ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದಿರುವುದರಿಂದ ಹಾಗೂ ಸಭೆಯಲ್ಲಿ ಸಮುದಾಯದ ಮುಖಂಡರು ಡಿಸಿ ಮನ್ನಾ ಜಮೀನು ಇನ್ನೂ ಹೆಚ್ಚು ಇದೆ ಎಂಬ ಅಂಶಗಳನ್ನು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಒಟ್ಟಾರೆಯಾಗಿ ಅಡಂಗಲ್‌ ಒಳಗೊಂಡಂತೆ ಎಲ್ಲ ದಾಖಲೆ ಪರಿಶೀಲಿಸಿ, ಡಿಸಿ ಮನ್ನಾ ಜಮೀನು ಎಷ್ಟಿದೆ ಎಂಬುದನ್ನು ಒಂದರಿಂದ ಒಂದೂವರೆ ತಿಂಗಳಲ್ಲಿ ಪರಿಶೀಲಿಸಿ ವರದಿ ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ವರದಿ ಬಂದ ಅನಂತರ ಅದನ್ನು ಪ್ರಕಟಿಸಿ, ಸಾರ್ವಜನಿಕರಿಂದಲೂ ಆಕ್ಷೇಪಣೆ ಆಹ್ವಾನಿಸಲಾಗುವುದು ಎಂದು ಹೇಳಿದರು.

More articles

Latest article