Monday, April 8, 2024

ಶಾಸಕರ ಹಕ್ಕು ಚ್ಯುತಿ ಆರೋಪ : ಡಿಸಿ ಭರವಸೆ ಹಿನ್ನಲೆ ಪ್ರತಿಭಟನೆ ವಾಪಾಸ್’ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರ ಕೆಲಸಗಳ ವಿಚಾರದಲ್ಲಿ ಆಡಳಿತಾತ್ಮಕ ಹಸ್ತಕ್ಷೇಪ, ಕರ್ತವ್ಯದಲ್ಲಿ ಹಕ್ಕುಚ್ಯುತಿ ಮಾಡಲಾಗುತ್ತಿರುವುದನ್ನು ಖಂಡಿಸಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಅವರ ಮುಂದಾಳತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಪ್ರವೇಶ ದ್ವಾರದ ಬಳಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮೂಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್‌ ಅವರ ಕ್ಷೇತ್ರ ವ್ಯಾಪ್ತಿಯ ಪಂಚಾಯತ್‌ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದ ಹಾಗೂ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವ ಕ್ರಮ, ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್‌ ಅವರ ಕ್ಷೇತ್ರದಲ್ಲಿ ಕೂಡಾ ಆಡಳಿತದ ಹಸ್ತಕ್ಷೇಪ ಮಾಡಿರುವುದನ್ನು ಈ ಸಂದರ್ಭದಲ್ಲಿ ಖಂಡಿಸಲಾಯಿತು.

ಹಳೆಯಂಗಡಿ ಚುನಾವಣೆ ಸಂದರ್ಭದಲ್ಲಿ ಅಡ್ಡಿ ಪಡಿಸಲಾಗಿದೆ. ಇರುವೈಲಿನಲ್ಲಿ ಜಿಲ್ಲಾಧಿಕಾರಿ ಕಚೇರಿಯ ನಿರ್ದೇಶನವನ್ನೂ ಗಾಳಿಗೆ ತೂರಲಾಗಿದೆ. ಶಾಸಕರಿಗೆ ಕರ್ತವ್ಯ ನಿರ್ವಹಣೆ ಮಾಡಲು ಬಿಡುತ್ತಿಲ್ಲ. ಯಾವುದೇ ಕಾರಣಕ್ಕೂ ಸರಿಯಾದ ಉತ್ತರ ಸಿಗುತ್ತಿಲ್ಲ. ತಕ್ಷಣ ಈ ಎಲ್ಲಾ ಆಧ್ವಾನಗಳಿಗೆ ಕಡಿವಾಣ ಹಾಕಬೇಕು ಎಂದು ಮಾಜಿ ಎಂಎಲ್‌ಸಿ ಜಿಲ್ಲಾಧೀಕಾರಿ ಮುಲ್ಲೈ ಮುಹಿಲನ್‌ ಅವರ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಜಿಲ್ಲಾಧೀಕಾರಿ ಮುಲ್ಲೈ ಮುಹಿಲನ್‌ ವಿವರಣೆ ನೀಡಿ, ಇರುವೈಲು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಿಂದ ಯಾವುದೇ ರೀತಿಯಲ್ಲೂ ಲಿಖಿತ ಆದೇಶ ನಾವು ನೀಡಿಲ್ಲ ಎಂದರು.

ಆಮಾನತು ಮಾಡಿದವರನ್ನು ಮರು ನೇಮಕ ಮಾಡಲು ನಾನು ಕ್ರಮ ವಹಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌, ಶಾಸಕರಾದ ವೇದವ್ಯಾಸ ಕಾಮತ್‌, ಉಮಾನಾಥ ಕೋಟ್ಯಾನ್‌, ಹರೀಶ್ ಪೂಂಜಾ, ಭರತ್‌ ಶೆಟ್ಟಿ, ಭಾಗೀರಥಿ ಮುರುಳ್ಯ, ರಾಜೇಶ್ ನಾಯ್ಕ್‌, ಸೇರಿದಂತೆ ಹಲವು ಮಂದಿ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಧರಣಿ ಬಳಿಕ ಪ್ರತಿಕ್ರಿಯೆ ನೀಡಿದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರು, ಸಿದ್ಧರಾಮಯ್ಯ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದ್ವೇಷದ ರಾಜಕಾರಣ ಆರಂಭವಾಗಿದೆ. ಇದರ ಪರಿಣಾಮ ವಿರೋಧ ಪಕ್ಷದ ಶಾಸಕರ ಹಕ್ಕುಗಳನ್ನು ಚ್ಯುತಿ ಮಾಡಲಾಗುತ್ತಿದೆ ಎಂದರು.

ಪಕ್ಷದ ನಾಯಕರ ಮಾತುಗಳನ್ನು ಕೇಳಿ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಮೂರು ಘಟನೆಗಳಲ್ಲಿ ಇದು ಕಂಡು ಬಂದಿದೆ. ಇರುವೈಲು ಗ್ರಾಮ ಪಂಚಾಯತ್‌ ಉದ್ಘಾಟನೆ ಸಂದರ್ಭದಲ್ಲಿ ಇದು ನಡೆದಿದೆ. ಕೇವಲ ಇದಷ್ಟೇ ಅಲ್ಲದೇ ಬಂಟ್ವಾಳ ಕ್ಷೇತ್ರದಲ್ಲೂ ಇಂತಹ ಘಟನೆ ನಡೆದಿದೆ ಎಂದು ದೂರಿದರು.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಧಿಕಾರಿಗಳು ಕ್ರಮ ವಹಿಸುವಂತೆ ನಾವು ಒತ್ತಡ ಹಾಕಿದ್ದೇವೆ ಎಂದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...