ಮಂಗಳೂರು: ಸ್ವಾತಂತ್ರ್ಯ ದಿನದ ಅಂಗವಾಗಿ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಅಧಿಕಾರಿಗಳು ಹಾಗೂ ಇತರ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.