ಸುಳ್ಯ: ಆಸ್ತಿ ಹಕ್ಕು ಖುಲಾಸೆಗೆ ಸಂಬಂಧಿಸಿದ ಅರ್ಜಿಗೆ ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.
ಆರಂತೋಡಿನ ಅಡ್ತಲೆ ಹರಿಪ್ರಸಾದ್ ಅವರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕಡತ ವಿಲೇವಾರಿಗಾಗಿ ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ8000 ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಮಿಯಾಸಾಬ್ ಮುಲ್ಲಾ ಶನಿವಾರ ಬೆಳಗ್ಗೆ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿರುವುದಾಗಿ ತಿಳಿದು ಬಂದಿದೆ.