Friday, April 19, 2024

ಜೆಸಿಬಿ ಬಳಸಿ ಎಟಿಎಂ ಹಣ ಕಳವು ಯತ್ನ – ನಾಲ್ವರು ಆರೋಪಿಗಳು ಅರೆಸ್ಟ್

ಸುರತ್ಕಲ್: ಸುರತ್ಕಲ್‌ನ ರಾಜಶ್ರೀ ಕಟ್ಟಡದಲ್ಲಿ ಎಟಿಎಂಗೆ ಜೆಸಿಬಿ ನುಗ್ಗಿಸಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರನ್ನು ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತರನ್ನು ಶಿವಮೊಗ್ಗ ಮೂಲದ ದೇವರಾಜ್, ಭರತ್ ಹೆಚ್, ನಾಗರಾಜ ನಾಯ್ಕ್ ಮತ್ತು ಧನರಾಜ್ ನಾಯ್ಕ್ ಎಂದು ಗುರುತಿಸಲಾಗಿದೆ. ಈ ಪೈಕಿ ಆರೋಪಿ ಧನರಾಜ್ ನಾಯ್ಕ್ ಕೃತ್ಯ ನಡೆಸಿದ್ದ ಆರೋಪಿಗಳಿಗೆ ಆರ್ಥಿಕ ಸಹಾಯ ಮಾಡಿದ್ದ.

ಆರೋಪಿಗಳಿಂದ 50 ಸಾವಿರ ಮೌಲ್ಯದ ದ್ವಿಚಕ್ರ ವಾಹನ ಹಾಗೂ ಎರಡು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 457, 380, 511 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ದೇವರಾಜ್ ನಾಯ್ಕ್ ಹಾಗೂ ನಾಗರಾಜ ನಾಯ್ಕ ವಿರುದ್ಧ ಶಿಕಾರಿಪುರ ಪಟ್ಟಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿವೆ.

ಆರೋಪಿಗಳ ಪೈಕಿ ಮೂವರಿಗೆ ಕೋರ್ಟ್ 4 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ್ದು, ನಾಲ್ಕನೇ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...