Wednesday, October 18, 2023

MDMA ಮಾರುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್​ಗಳು ಅರೆಸ್ಟ್​

Must read

ಮಂಗಳೂರು: ಮಾದಕ ವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.

ಸುರತ್ಕಲ್​​ನ ತಡಂಬೈಲ್ ಬೀಚ್ ಬಳಿ ಕಾರಿನಲ್ಲಿ 2 ಜನ ವ್ಯಕ್ತಿಗಳು ಅಕ್ರಮವಾಗಿ ಮಾದಕ ವಸ್ತುವಾದ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಬಂಧಿಸಿದ್ದಾರೆ.

ಆರೋಪಿಗಳ ವಶದಿಂದ ಒಟ್ಟು 52 ಗ್ರಾಂ ತೂಕದ ರೂ. 2,60,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ವೋಕ್ಸ್ ವ್ಯಾಗನ್ ಕಾರು, ಮೊಬೈಲ್ ಫೋನುಗಳು-2, ನಗದು ರೂ. 1,800/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 7,83,300/-ಆಗಬಹುದು.

ಆರೋಪಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

More articles

Latest article