Saturday, April 6, 2024

ಉದ್ಯೋಗಕ್ಕೆ ಬಂದ ಯುವತಿ ನಾಪತ್ತೆ- ಪ್ರಕರಣ ದಾಖಲು

ಮಂಗಳೂರು: ಯುವತಿಯೋರ್ವಳು ಉದ್ಯೋಗಕ್ಕೆಂದು ಮಂಗಳೂರಿಗೆ ಬಂದು ನಾಪತ್ತೆಯಾಗಿರುವ ಕುರಿತು ಆಕೆಯ ತಂದೆ ದೂರು ನೀಡಿದ್ದಾರೆ.

ಹೊನ್ನಾವರದ ಸೋನಿಯಾ ರೋಡ್ರಿಗಸ್‌ ನಾಪತ್ತೆಯಾದ ಯುವತಿ.

ಸೋನಿಯಾ ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದು, ಬೆಂದೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು.

ಇತ್ತೀಚೆಗೆ ಆಕೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್‌ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ ಎಂದು ಆಕೆಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...