Tuesday, October 31, 2023

ಇಬ್ಬರು ಬಾಲಕರು ನಾಪತ್ತೆ : ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Must read

ವಿಟ್ಲ : ಬಾಲಕರ ವಿದ್ಯಾರ್ಥಿ ನಿಲಯದಿಂದ ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ

ನಾಪತ್ತೆಯಾದ ವಿದ್ಯಾರ್ಥಿಗಳನ್ನು ದೀಕ್ಷಿತ್ ಮತ್ತು ಗಗನ್ ಎನ್ನಲಾಗಿದೆ.

ಇಬ್ಬರು ವಿದ್ಯಾರ್ಥಿಗಳು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ತೆರಳಿದ್ದು, ಸಂಜೆ ವಾಪಾಸ್ ಬಂದಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲಿ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರು ಪತ್ತೆಯಾಗದ ಹಿನ್ನಲೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಪ್ರಮೀಳಾ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

More articles

Latest article