Sunday, April 7, 2024

ಯುವಕನ ಮೇಲೆ ತಲವಾರು ದಾಳಿ : ಮೂವರು ಆರೋಪಿಗಳ ಬಂಧನ

ಮಂಗಳೂರು: ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅನ್ಯ ಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿದವರ ವಿರುದ್ದ ಕಾವೂರು ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ.

ಚರಣ್ ರಾಜ್, ಸುಮಂತ್‌ ಬರ್ಮನ್‌, ಅವಿನಾಶ ಬಂಧಿತ ಆರೋಪಿಗಳು

ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಎಮ್.ವಿ.ಶೆಟ್ಟಿ ಕಾಲೇಜು ರೋಡ್ ಬಳಿ ವ್ಯಕ್ತಿಯೊಬ್ಬರು ನಡೆದುಕೊಂಡು ಮನೆಗೆ ಹೋಗುತ್ತಿರುವಾಗ ಉರುಂದಾಡಿ ಗುಡ್ಡೆಯ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂಬವರು ಸ್ಕೂಟಿಯಲ್ಲಿ ಬಂದು ಅಡ್ಡಹಾಕಿ ತಲವಾರು ಬಿಸಿದ್ದಾರೆ. ಅದೃಷ್ಟವಶಾತ್  ಅನ್ಯಕೋಮಿನ ವ್ಯಕ್ತಿಯು ತಪ್ಪಿಸಿಕೊಂಡಿದ್ದಾರೆ. ಆದರೆ ಮುಖಕ್ಕೆ ಗಾಯವಾಗಿದೆ.

ಇನ್ನು ಕಾವೂರು ಪೊಲೀಸರು ಕಾರ್ಯಪ್ರವತ್ತರಾಗಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಐ.ಪಿ.ಎಸ್‌, ಡಿಸಿಪಿಗಳಾದ ಅಂಶು ಕುಮಾ‌ರ್, ದಿನೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಎಸಿಪಿ ಮನೋಜ್ ಕುಮಾರ್ ರವರ ಸಲಹೆಯಂತೆ ಪಾಲ್ಗೊಂಡಿದ್ದಾರೆ.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...