ಬಿ.ಸಿ.ರೋಡ್ : ನೇತ್ರಾವತಿ ನದಿಯ ಒಳಹರಿವು ಗಣನೀಯ ಕುಸಿತ ಕಂಡು ಬಂದಿದ್ದು, ತುಂಬೆ ವೆಂಟೆಡ್ ಡ್ಯಾಂನಲ್ಲಿ 30 ಗೇಟ್‌ಗಳಿದ್ದು ಮಂಗಳೂರು ಮಹಾನಗರ ಪಾಲಿಕೆಗೆ ಕುಡಿಯುವ ನೀರಿಗಾಗಿ ಕೇವಲ ಒಂದು ಗೇಟ್‌ನಿಂದ ಹೊರಕ್ಕೆ ನೀರು ಬಿಡಲಾಗಿದೆ. ಮಂಗಳೂರು ಮಹಾನಗರದ ಜನತೆಗೆ ಮುಂದಿನ ದಿನಗಳಲ್ಲಿ ಸಮಸ್ಯೆ ಬರದಂತೆ ಈಗಲೇ ನೀರು ಶೇಖರಿಸಿಡಲು ಆರಂಭವಾಗಿದೆ.
ಕಳೆದ ವರ್ಷ ನಿರಂತರ ಮಳೆ ಸುರಿಯುತ್ತಿದ್ದು ಮಳೆ ಬರುವ ಸಂದರ್ಭ ಎಲ್ಲಾ ಗೇಟ್‌ಗಳಿಂದ ನೀರನ್ನು ಹೊರಕ್ಕೆ ಬಿಡಲಾಗಿತ್ತು. ಆದರೆ ಈ ವರ್ಷ ಜುಲೈ ತಿಂಗಳಲ್ಲಿ ನಿರಂತರವಾಗಿ 15 ದಿನ ಮಳೆ ಸುರಿದಿದ್ದು, ನದಿಯ ನೀರಿನ ಮಟ್ಟ ಡ್ಯಾಂನಲ್ಲಿಯೂ 8.5ರಷ್ಟು ಹೆಚ್ಚಳವಾಗಿತ್ತು. ಅಲ್ಲದೇ ತಗ್ಗು ಪ್ರದೇಶಗಳೆಲ್ಲವೂ ಮುಳುಗಡೆಯಾಗಿತ್ತು.
ನೇತ್ರಾವತಿ ನದಿಯಲ್ಲಿ ಅಲ್ಲಲ್ಲಿ ಸಣ್ಣ ಸಣ್ಣ ಡ್ಯಾಂ ಕಟ್ಟಿರುವುದರಿಂದ ನದಿಯಲ್ಲಿ ಒಳ ಹರಿವು ಈಗ ಸ್ಥಗಿತವಾಗಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು ನೇತ್ರಾವತಿಯ ಒಳಹರಿವಿನ ಪ್ರಮಾಣ ಕುಸಿತವಾಗಿದೆ. ಆಗಸ್ಟ್ ತಿಂಗಳಲ್ಲಿ ಮಳೆ ಇಲ್ಲದಿದ್ದುದರಿಂದ ತುಂಬೆ ಡ್ಯಾಂನಲ್ಲಿ ನೀರು ಹೊರ ಬಿಡುವುದನ್ನು ಕಡಿಮೆ ಮಾಡಲಾಗಿದೆ.
ಮಂಗಳೂರಿನಲ್ಲಿ ಬೇಸಿಗೆಯಲ್ಲಿ ನೀರಿ ಸಮಸ್ಯೆಯಾಗದೆ ಇಎಬೇಕಾದರೆ ಈಗಿನಿಂದಲೇ ಒಂದಿಷ್ಟು ಮುಂಜಾಗ್ರತೆ ವಹಸಬೇಕು. ಹಾಗಾಗಿ ಈಗಲೇ ಆ ನಿಟ್ಟಿನಲ್ಲಿ ಸಂಬAಧಪಟ್ಟ ಇಲಾಖೆ ಕ್ರಮ ಕೈಗೊಳ್ತಾ ಇದೆ.
ಈ ವರ್ಷ ಮಳೆ ಆರಂಭವಾದದ್ದೇ ತುಂಬಾ ತಡವಾಗಿ. ಆದರೆ ಜುಲೈ ತಿಂಗಳ ಅಂತ್ಯದಲ್ಲಿ ಮಳೆ ಜೋರು ಬಂದಿದ್ದು ಮುಂದೆ ಇದೇ ರೀತಿ ಮಳೆ ಬರುತ್ತದೆಂಬ ಆಶೆಯಲ್ಲಿದ್ದೆವು. ಆದರೆ ಆಗಸ್ಟ್ ತಿಂಗಳಿನಲ್ಲಿ ಒಂದೆರಡು ದಿನ ಮಳೆ ಬಂದಿದ್ದು ಬಿಟ್ಟರೆ ಮತ್ತೆ ಮಳೆ ಬರಲೇ ಇಲ್ಲ. ಈಗಿನ ಬಿಸಿಲು ನೋಡಿದರೆ ಎಪ್ರಿಲ್, ಮೇ ತಿಂಗಳಿನಲ್ಲಿ ಬರುವಷ್ಟು ಬಿಸಿಲು ಇದೆ. ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಬರಬಹುದು.
– ಗಣೇಶ್, ಸುಜೀರ್ ದತ್ತನಗರ
ತುಂಬೆ ಅಣೆಕಟ್ಟಿನಲ್ಲಿ ಪ್ರಸ್ತುತ 5 ಮಿಟರ್ ನೀರು ನಿಲ್ಲಿಸಲಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ನದಿಯಲ್ಲಿ ನೀರು ಕಡಿಮೆ ಇರುವುದರಿಂದ ಡ್ಯಾಂನಿAದ ನೀರನ್ನು ಹೊರಬಿಡುವುದನ್ನು ಕಡಿಮೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಳೆಬರುವ ನಿರೀಕ್ಷೆ ಇದ್ದು, ಒಂದು ವೇಳೆ ಮಳೆ ಕಡಿಮೆಯಾದರೆ ಮಂಗಳೂರು ಜನತೆಗೆ ನೀರು ಸಮಸ್ಯೆಯಾಗದಂತೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಹೊಸ ಯೋಜನೆ ರೂಪಿಸಲಾಗುವುದು.
– ನರೇಶ್ ಶೆಣೈ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಂಗಳೂರು ಮಹಾನಗರ ಪಾಲಿಕೆ ನೀರು ಸರಬರಾಜು ವಿಭಾಗ
29ವೈಎ ತುಂಬೆ 1, 29ವೈಎ ತುಂಬೆ 2, 29ವೈಎ ತುಂಬೆ 3