ಮಂಗಳೂರು: ಹಿಂದೂ ದೇವರ ಬಗ್ಗೆ ಅಶ್ಲೀಲವಾದ ಸಂದೇಶವನ್ನು ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಹಂಚಿಕೊಂಡ ಆರೋಪಿಯನ್ನು ನಗರದ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನಗರದ ಬಿಕರ್ನಕಟ್ಟೆಯ ಮಸೀದಿ ಹಿಲ್ ರಸ್ತೆ ಬಳಿಯ ನಿವಾಸಿ ಮೊಹಮ್ಮದ್ ಸಲ್ಮಾನ್ ಬಂಧಿತ ಆರೋಪಿ.
ಆರೋಪಿಯು ಹಿಂದೂ ದೇವರ ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ನಗರದ 7ನೇ ಜೆ.ಎಂ.ಎಫ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.