Tuesday, April 9, 2024

ಪಾರ್ಟ್‌ಟೈಮ್ ಕೆಲಸದ ಸಂದೇಶ ಕಳುಹಿಸಿ ವಂಚನೆ

ಮಂಗಳೂರು: ಆನ್‌ಲೈನ್‌ನಲ್ಲಿ ಪಾರ್ಟ್‌ಟೈಂ ಉದ್ಯೋಗದ ಆಮಿಷವೊಡ್ಡಿ ಒಟ್ಟು 10.88 ಲಕ್ಷ ರೂ. ಹೂಡಿಕೆ ಮಾಡಿಸಿ ವಂಚಿಸಿದ ಬಗ್ಗೆ ಮಂಗಳೂರಿನ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಯುಯೇಟ್‌ ಮೀಡಿಯಾ ಕಂಪೆನಿಯ ಪ್ರತಿನಿಧಿಯೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿ ದೂರುದಾರರಿಗೆ ಆ.26ರಂದು ವಾಟ್ಸಾಪ್ ಸಂದೇಶ ಕಳುಹಿಸಿದ್ದ. ಆನ್‌ಲೈನ್‌ನಲ್ಲಿ ಟಾಸ್ಕ್ ಗಳ ಮೂಲಕ ಪ್ರತಿದಿನ 2-3 ಸಾವಿರ ರೂ. ಸಂಪಾದನೆ ಮಾಡಬಹುದು ಎಂದು ಸಂದೇಶದಲ್ಲಿ ತಿಳಿಸಿದ್ದ. ಇದನ್ನು ನಂಬಿದ ದೂರುದಾರರು ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡಿದ್ದಾರೆ

ಆರಂಭದಲ್ಲಿ 1,000 ರೂ.ಗಳಿಂದ 3,000 ರೂ.ಗಳನ್ನು ತೊಡಗಿಸಿದಾಗ ಅವರ ಖಾತೆಗೆ ಅಷ್ಟೇ ಹಣ ಜಮೆಯಾಗಿತ್ತು. ಆದರೆ ಅನಂತರವೂ ಹಣ ಹೂಡಿಕೆಗೆ ಅಪರಿಚಿತ ಒತ್ತಾಯಿಸಿದ್ದ. ಅದರಂತೆ ದೂರುದಾರರಿಂದ ಹಂತಹಂತವಾಗಿ ಆ.28ರ ವರೆಗೆ ಒಟ್ಟು 10.88 ಲಕ್ಷ ರೂ. ವರ್ಗಾಯಿಸಿಕೊಂಡು ಯಾವುದೇ ಮೊತ್ತ ಮರುಪಾವತಿಸದೆ ವಂಚಿಸಿದ್ದಾನೆ.

ಇನ್ನು ಈ ಬಗ್ಗೆ ಸೆನ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

More from the blog

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...