Friday, October 27, 2023

ಪುಣಚ ಗ್ರಾಮ ಪಂಚಾಯತ್ ಗ್ರಾಮ ಸಭೆ

Must read

ವಿಟ್ಲ: ಪುಣಚ ಗ್ರಾಮ ಪಂಚಾಯತ್ ಸಭಾಭವನದಲ್ಲಿ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ನ ಸುವರ್ಣ ಸೌಧದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು ಅಧ್ಯಕ್ಷತೆ ಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಬಂಟ್ವಾಳ ತಾಲೂಕು ಸಹಾಯಕ ನಿರ್ದೇಶಕಿ ಭಾಗವಹಿಸಿದ್ದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಯ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮಸ್ಥರು ರಸ್ತೆ, ಕುಡಿಯುವ ನೀರು, ಮುಂತಾದ ಹತ್ತಾರು ಸಮಸ್ಯೆಗಳ ಬಗ್ಗೆ ಬೇಡಿಕೆ ಸಲ್ಲಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಪ್ರತಿಭಾ ಜಗನ್ನಾಥ ಗೌಡ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು. ಪುಣಚ ಗ್ರಾಮ ಪಂಚಾಯತ್ ಪಿಡಿಒ ರವಿ ಕಾರ್ಯಕ್ರಮ ನಿರೂಪಿಸಿದರು.

More articles

Latest article